ಬಂಟ್ವಾಳ: ಬಂಟ್ವಾಳ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಕವಿ ಸರ್ವಜ್ಞ ಜಯಂತಿಯನ್ನು ತಾಲೂಕು ಮಟ್ಟದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಂಟ್ವಾಳ ಉಪತಹಸೀಲ್ದಾರ್ ರಾಜೇಶ್ ನಾಯ್ಕ್, ಸರ್ವಜ್ಞ ತನ್ನ ಹಿತನುಡಿಗಳಿಂದ ಸಮಾಜವನ್ನು ಒಳ್ಳೆಯ ಹಾದಿಯಲ್ಲಿ ಮುನ್ನಡೆಸಿದ್ದಾರೆ. ಇವರ ತ್ರಿಪದಿಗಳಲ್ಲಿರುವ ಸಂದೇಶಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಆಡು ಮಾತಿನಿಂದ ಸಮಾಜದ ಅಂಕುಡೊಂಕುಗಳನ್ನು ತಿದ್ದಿದವರು ಸರ್ವಜ್ಞ. ಸಮಾಜದ ತಾರತಮ್ಯಗಳನ್ನು ಕಡಿಮೆ ಮಾಡಲು ಪ್ರಯತ್ನಿಸಿದರು ಎಂದು ರಾಜ್ಯ ಕುಲಾಲ ಕುಂಬಾರರ ಮಹಿಳಾ ಸಂಘದ ಅಧ್ಯಕ್ಷೆ ಭಾರತಿ ಶೇಷಪ್ಪ ಈ ಸಂದರ್ಭ ಹೇಳಿದರು. ಪುರಸಭಾ ಸದಸ್ಯರಾದ ಹರಿಪ್ರಸಾದ್, ಶೋಭಾ ಹರಿಶ್ಚಂದ್ರ, ಪ್ರಮುಖರಾದ ಸುಂದರ ಬಿ, ಪದ್ಮನಾಭ ವಿಟ್ಲ, ಸುಕುಮಾರ್ ಬಂಟ್ವಾಳ, ಪುನೀತ್ ಎಸ್ ಮೈರಾನ್ ಪಾದೆ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವಿಷಯ ನಿರ್ವಾಹಕ ವಿಶು ಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ಜನಾರ್ದನ ಬಂಟ್ವಾಳ್ ಸ್ವಾಗತಿಸಿದರು. ಆಡಳಿತ ಶಾಖೆಯ ಸೀತಾರಾಮ ಕಮ್ಮಾಜೆ ವಂದಿಸಿದರು.
Be the first to comment on "ಬಂಟ್ವಾಳದಲ್ಲಿ ತಾಲೂಕು ಮಟ್ಟದ ಸರ್ವಜ್ಞ ಜಯಂತಿ ಆಚರಣೆ"