


ಬಂಟ್ವಾಳ: ಬಂಟ್ವಾಳ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ, ಉದ್ಯಮಿ ಚಂದ್ರಹಾಸ ಶೆಟ್ಟಿ ಬೋಳಂತೂರು (57) ದೀರ್ಘಕಾಲದ ಅನಾರೋಗ್ಯದ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗ್ಗೆ ನಿಧನ ಹೊಂದಿದರು. ಪತ್ನಿ, ಇಬ್ಬರು ಪುತ್ರರನ್ನು ಅವರು ಹೊಂದಿದ್ದರು. 2007ರಿಂದ 2009ರವರೆಗೆ ಅವರು ಬಂಟ್ವಾಳ ತಾಲೂಕು ಪಂಚಾಯಿತಿ ಅಧ್ಯಕ್ಷರಾಗಿದ್ದರು. ಅದಕ್ಕೂ ಮೊದಲು ವೀರಕಂಭ ಗ್ರಾಪಂ ಅಧ್ಯಕ್ಷರಾಗಿದ್ದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿದ್ದರು. ಸ್ಥಳೀಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ, ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ, ಬಿ.ಸಿ.ರೋಡ್ ಶ್ರೀ ಅನ್ನಪೂರ್ಣೇಶ್ವರಿ ದೇವಿ ದೇವಸ್ಥಾನ ಆಡಳಿತ ಸಮಿತಿ ಅಧ್ಯಕ್ಷ ಸಹಿತ ಹಲವು ಸೇವಾ ಸಂಘ, ಸಂಸ್ಥೆಗಳ ಅಧ್ಯಕ್ಷ, ಗೌರವಾಧ್ಯಕ್ಷರಾಗಿ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು, ಬೀಡಿ ಸಹಿತ ಹಲವು ಉದ್ಯಮ, ವ್ಯವಹಾರ, ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.



Be the first to comment on "ಬಂಟ್ವಾಳ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಬೋಳಂತೂರು ನಿಧನ"