ಬಂಟ್ವಾಳ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ವತಿಯಿಂದ ವಾಮದಪದವಿನ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಮತ್ತು ಚೆನ್ನೈತೋಡಿಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡಗಳ ಉದ್ಘಾಟನಾ ಕಾರ್ಯಕ್ರಮ ಮಾರ್ಚ್ 1ರಂದು ಚೆನ್ನೈತೋಡಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಕಟ್ಟಡದಲ್ಲಿ ನಡೆಯಲಿದೆ.
ಬೆಳಗ್ಗೆ 9 ಗಂಟೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸುವರು. ಸಚಿವ ಎಸ್.ಅಂಗಾರ ಉಪಸ್ಥಿತರಿರುವರು. ಅಧ್ಯಕ್ಷತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಜಿಪಂ, ತಾಪಂ ಸದಸ್ಯರು, ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಸದಸ್ಯರು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿರುವರು ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಿಂದಿಯಾ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…