ಬಂಟ್ವಾಳ: ಬಂಟ್ವಾಳ ತಾಲೂಕಿನ ಮಾಣಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಮಕ್ಕಳ ಗ್ರಾಮಸಭೆ ನಡೆಯಿತು. ಈ ಸಂದರ್ಭ ಮಾತನಾಡಿದ ಮಾಣಿ ಗ್ರಾಪಂ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಸ್ವಚ್ಛತೆ ಮಕ್ಕಳಿಂದ ಸಾಧ್ಯ, ಮಕ್ಕಳು ಪ್ರಯತ್ನಿಸಿದರೆ ತಮ್ಮ ಮನೆ, ಶಾಲೆಯೊಂದಿಗೆ ಪರಿಸರವನ್ನೂ ಸ್ವಚ್ಛವಾಗಿ ಇಟ್ಟುಕೊಳ್ಳಬಹುದು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ರೋಹಿಣಿ, ಸಮೂಹ ಸಂಪನ್ಮೂಲ ವ್ಯಕ್ತಿ ಸತೀಶ್ ಇಲಾಖೆಗಳಿಗೆ ಸಂಬಂಧಪಟ್ಟ ಮಾಹಿತಿಗಳನ್ನು ನೀಡಿದರು.ವಿವಿಧ ಶಾಲೆಗಳಿಂದ ಆಗಮಿಸಿದ ಮಕ್ಕಳು ಹಲವು ಬೇಡಿಕೆಗಳೊಂದಿಗೆ ತಮ್ಮ ಅಹವಾಲುಗಳನ್ನು ಮಂಡಿಸಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಪಂಚಾಯತ್ ಸದಸ್ಯರುಗಳಾದ ಇಬ್ರಾಹಿಂ ಕೆ. ಮಾಣಿ, ರಮಣಿ, ನಾರಾಯಣ ಶೆಟ್ಟಿ ತೋಟ, ಸೀತಾ, ಸುಜಾತಾ, ಮಿತ್ರಾಕ್ಷಿ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ ಗಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು
Be the first to comment on "ಮಾಣಿ ಗ್ರಾಪಂನಲ್ಲಿ ಮಕ್ಕಳ ಗ್ರಾಮಸಭೆ, ಪರಿಸರ ಸ್ವಚ್ಛತೆಗೆ ಆದ್ಯತೆ"