ಬಂಟ್ವಾಳ: ಬಿ.ಸಿ.ರೋಡಿನ ಸಂಚಯಗಿರಿಯಲ್ಲಿರುವ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಒನಕೆ ಓಬವ್ವ ಅಧ್ಯಯನ ಪೀಠ ಹಾಗೂ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಒನಕೆ ಓಬವ್ವ ಮತ್ತು ಸ್ಥಳೀಯ ಚರಿತ್ರೆ ಎಂಬ ಉಪನ್ಯಾಸ ನಡೆಯಿತು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಹಂಪಿ ಕನ್ನಡ ವಿವಿ ಕುಲಪತಿ ಡಾ. ಸ.ಚಿ.ರಮೇಶ್, ಡಾ. ತುಕಾರಾಮ್ ಪೂಜಾರಿಯವರು ಇಡೀ ತುಳುನಾಡಿನ ಚರಿತ್ರೆಯನ್ನು ಈ ವಸ್ತು ಸಂಗ್ರಹಾಲಯದ ಮೂಲಕ ತೆರೆದಿಟ್ಟಿದ್ದಾರೆ ಎಂದರು.
ಸುರತ್ಕಲ್ ಗೋವಿಂದದಾಸ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ| ಬಿ.ವೈ.ಕುಮಾರ್ ಅವರು ವಿಶೇಷ ಉಪನ್ಯಾಸ ನೀಡಿದರು.
ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ.ತುಕಾರಾಮ ಪೂಜಾರಿ ಅವರು ಸ್ಥಳೀಯ ಚರಿತ್ರೆಯ ಕುರಿತು ವಿಚಾರ ತಿಳಿಸಿದರು. ವೇದಿಕೆಯಲ್ಲಿ ಮಂಗಳೂರು ಎಂಆರ್‌ಪಿಎಲ್‌ನ ಸಿಎಸ್‌ಆರ್ ವಿಭಾಗದ ಉಪಮಹಾಪ್ರಬಂಧಕಿ ವೀಣಾ ಶೆಟ್ಟಿ, ಬಂಟ್ವಾಳ ವಿಶೇಷ ಮಕ್ಕಳ ಪಾಲನಾ ಕೇಂದ್ರ ನಿರ್ಮಲ ಹೃದಯದ ಸಂಚಾಲಕ ದಾಮೋದರ್ ಬಿ.ಎಂ. ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪರಿಸರ ಪ್ರೇಮಿ ಎ.ದಾಮೋದರ್, ಪತ್ರಿಕಾ ವಿತರಕ ನರಸಿಂಹ ಪೈ ಅವರನ್ನು ಸಮ್ಮಾನಿಸಲಾಯಿತು. ಹಂಪಿ ಕನ್ನಡ ವಿವಿಯ ಒನಕೆ ಓಬವ್ವ ಅಧ್ಯಯನ ಪೀಠದ ಸಂಚಾಲಕ ಡಾ. ಎ.ಶ್ರೀಧರ್ ಪ್ರಸ್ತಾವನೆಗೈದರು. ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಡಾ. ಆಶಾಲತಾ ಎಸ್.ಸುವರ್ಣ ಸ್ವಾಗತಿಸಿದರು. ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಜಾನಪದ ನೃತ್ಯಗಳನ್ನು ಪ್ರಸ್ತುತ ಪಡಿಸಿದರು.