ಮಾಣಿ ಗ್ರಾಪಂ ಉಪಾಧ್ಯಕ್ಷೆ ಪ್ರೀತಿ ಲ್ಯಾನ್ಸಿ ಪಿರೇರಾ ಅವರಿಗೆ ಅಭಿನಂದನಾ ಕಾರ್ಯಕ್ರಮ

ಬಂಟ್ವಾಳ : ಮಾಣಿ ಗ್ರಾಮ ಪಂಚಾಯತ್ ನೂತನ ಉಪಾಧ್ಯಕ್ಷೆಯಾಗಿ ಆಯ್ಕೆಯಾದ ಪ್ರೀತಿ ಲ್ಯಾನ್ಸಿ ಪಿರೇರಾ ಅವರನ್ನು  ಸೂರಿಕುಮೇರು ಬೊರಿಮಾರ್ ಕಥೋಲಿಕ್ ಸಭಾ ಘಟಕ ವತಿಯಿಂದ ಸೂರಿಕುಮೇರು ಚರ್ಚ್ ನಲ್ಲಿ ಅಭಿನಂದಿಸಲಾಯಿತು.

ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್ ನ ಧರ್ಮಗುರು ವಂದನೀಯ ಗ್ರೆಗರಿ ಪಿರೇರಾ ಅಭಿನಂದಿಸಿ ಆಶೀರ್ವದಿಸಿದರು. ಚರ್ಚ್ ನ ನಡೆಸುವ ಚಟುವಟಿಕೆಯಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡ ಪ್ರೀತಿಯವರಿಗೆ ದೇವರು ಸಮಾಜ ಸೇವೆಯ ಒಳ್ಳೆಯ ಅವಕಾಶವನ್ನು ನೀಡಿದ್ದಾನೆ. ಇದನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ದೇವರು, ಸಮಾಜ ಮೆಚ್ಚುವ ಕೆಲಸ ಮಾಡಬೇಕು ಎಂದವರು ಆಶಿಸಿದರು.

ಸೂರಿಕುಮೇರು ಸೈಂಟ್ ಜೋಸೆಫ್  ಚರ್ಚ್ ಉಪಾಧ್ಯಕ್ಷ ಎಲಿಯಾಸ್ ಪಿರೇರಾ, ಕಾರ್ಯದರ್ಶಿ ಮೇರಿ ಡಿಸೋಜ, ಕಥೋಲಿಕ್ ಸಭಾದ ಅಧ್ಯಕ್ಷ ಸ್ಟೀವನ್ ಪ್ರಕಾಶ್ ಮಾರ್ಟಿಸ್,  ಕಾರ್ಯದರ್ಶಿ ಶಿಕ್ಷಕಿ ಐಡಾ ಲಸ್ರಾದೊ, ಕಾನ್ವೆಂಟ್ ಮುಖ್ಯಸ್ಥೆ ಸಿಸ್ಟರ್ ನ್ಯಾನ್ಸಿ, ಸಮಿತಿಯ ಸಂಯೋಜಕರಾದ ಸ್ಟೀವನ್ ಆಲ್ವಿನ್ ಪಾಯಸ್, ಸಂಚಾಲಕರಾದ ಅನಿತಾ ಮಾರ್ಟಿಸ್, ಕಥೋಲಿಕ್ ಸಭಾ ಸೂರಿಕುಮೇರು ಬೊರಿಮಾರ್ ಘಟಕದ ಸ್ಥಾಪಕಾಧ್ಯಕ್ಷ ರೋಶನ್ ಬೊನಿಫಾಸ್ ಮಾರ್ಟಿಸ್, ಖಜಾಂಚಿ ಕಿಶೋರ್ ಸಂತೋಷ್ ಪಿಂಟೋ ಉಪಸ್ಥಿತರಿದ್ದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮಾಣಿ ಗ್ರಾಪಂ ಉಪಾಧ್ಯಕ್ಷೆ ಪ್ರೀತಿ ಲ್ಯಾನ್ಸಿ ಪಿರೇರಾ ಅವರಿಗೆ ಅಭಿನಂದನಾ ಕಾರ್ಯಕ್ರಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*