ಬಂಟ್ವಾಳ: ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಮಾರ್ನಬೈಲ್ ನ ಮೆಲ್ಕಾರ್ ಮಹಿಳಾ ಕಾಲೇಜಿ ನಲ್ಲಿ ಶನಿವಾರ ವಿದ್ಯಾರ್ಥಿ ವೇತನ ವಿತರಣೆ, ಸನ್ಮಾನ ಸಮಾರಂಭ ಹಾಗೂ ತರಬೇತಿ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಬಂಟ್ವಾಳ ಪೊಲೀಸ್ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಮತ್ತು ಕೋವಿಡ್ ಸೇನಾನಿ ಡಾ. ಎಂ.ಎಂ.ಶರೀಫ್ ಆಲಡ್ಕ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಮಾತನಾಡಿದ ಟಿ.ಡಿ.ನಾಗರಾಜ್, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಲು ಸನ್ನದ್ದರಾಗಬೇಕು ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಬಂಟ್ವಾಳ ಘಟಕಾಧ್ಯಕ್ಷ ಎ.ಉಸ್ಮಾನ್ ಕರೋಪಾಡಿ, ವಿದ್ಯಾರ್ಥಿಗಳು ಕಲಿಕೆಯ ಜೊತೆಯಲ್ಲಿ ಜೀವನ ಮೌಲ್ಯಗಳನ್ನು ರೂಢಿಸಿಕೊಂಡು ದೇಶದ ಸತ್ಪ್ರಜೆಗಳಾಗಬೇಕು ಎಂದರು.
ವಗ್ಗ ಸರಕಾರಿ ಪ.ಪೂ.ಕಾಲೇಜು ಪ್ರಭಾರ ಪ್ರಿನ್ಸಿಪಾಲ್ ಶಮೀವುಲ್ಲಾ, ಮೆಲ್ಕಾರ್ ಮಹಿಳಾ ಕಾಲೇಜು ಪ್ರಿನ್ಸಿಪಾಲ್ ಬಿ.ಕೆ.ಅಬ್ದುಲ್ ಲತೀಪ್, ಸಂಸ್ಥೆಯ ಅವಿಭಜಿತ ದ.ಕ.ಜಿಲ್ಲೆ ಮತ್ತು ಬಂಟ್ವಾಳ ತಾಲೂಕು ಘಟಕದ ಕೋಶಾಧಿಕಾರಿ ಎಫ್.ಎಂ.ಬಶೀರ್ ಫರಂಗಿಪೇಟೆ, ಬಂಟ್ವಾಳ ತಾಲೂಕು ಪಂಚಾಯತ್ ಉಪಾದ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ ಅತಿಥಿಗಳಾಗಿ ಭಾಗವಹಿಸಿದ್ದರು. ತಾಲೂಕಿನ 30 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.
ಜಮೀಯ್ಯತುಲ್ ಫಲಾಹ್ ಜಿಲ್ಲಾ ಸಮಿತಿ ಮಾಜಿ ಅದ್ಯಕ್ಷ ಜಿ.ಮುಹಮ್ಮದ್ ಹನೀಫ್ ಗೋಳ್ತಮಜಲು, ಘಟಕಧ ಪೂರ್ವಾದ್ಯಕ್ಷರುಗಳಾದ ಬಿ.ಎ. ಮುಹಮ್ಮದ್ ಬಂಟ್ವಾಳ, ಮುಹಮ್ಮದ್ ರಫೀಕ್ ಆಲಡ್ಕ, ನೋಟರಿ ಅಬೂಬಕ್ಕರ್ ವಿಟ್ಲ, ಸುಲೈಮಾನ್ ಸೂರಿಕುಮೇರು, , ಪಿ.ಮಹಮ್ಮದ್ ಪಾಣೆಮಂಗಳೂರು, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಲತೀಫ್ ನೇರಳಕಟ್ಟೆ ಮುಹಮ್ಮದ್ ನಾರಂಕೋಡಿ, ಕೆ.ಎಸ್.ಮುಹಮ್ಮದ್ ಕಡೇಶ್ವಾಲ್ಯ, ಅಬ್ದುರ್ರಹ್ಮಾನ್ ಹಾಜಿ ಕೇಪು, ಸಯ್ಯದ್ ಇರಾ ಅಜೀವ ಸದಸ್ಯ ಟಿ.ಕೆ. ಮೊಹಮ್ಮದ್ ಟೋಪ್ಕೋ ವಿಟ್ಲ, ಉಪನ್ಯಾಸಕ ಮಜೀದ್ ಕಡೆಗೋಳಿ, ರಶೀದ್ ಉಕ್ಕುಡ ಮೊದಲಾದವರು ಉಪಸ್ಥಿತರಿದ್ದರು.
ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಎಚ್. ಇಕ್ಬಾಲ್ ಸ್ವಾಗತಿಸಿ ಪೂರ್ವಾಧ್ಯಕ್ಷ ಆಸಿಫ್ ಇಕ್ಬಾಲ್ ವಂದಿಸಿದರು. ಜೊತೆ ಕಾರ್ಯದರ್ಶಿ ಅಬ್ದುಲ್ ರಝಾಕ್ ಅನಂತಾಡಿ ಪ್ರಸ್ತಾವನೆಗೈದರು, ರಶೀದ್ ವಿಟ್ಲ ಸನ್ಮಾನಿತರನ್ನು ಪರಿಚಯಿಸಿದರು. ಬಿ.ಎಂ.ತುಂಬೆ ತರಬೇತಿ ನಡೆಸಿಕೊಟ್ಟು ಕಾರ್ಯಕ್ರಮ ನಿರೂಪಿಸಿದರು.
Be the first to comment on "ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ, ಸನ್ಮಾನ, ತರಬೇತಿ ಕಾರ್ಯಕ್ರಮ"