ಸಿದ್ಧಕಟ್ಟೆ: ಇತ್ತೀಚೆಗೆ ಅಸ್ಸಾಂನ ಗುವಾಹಟಿಯಲ್ಲಿ ನಡೆದ 32 ನೇ ರಾಷ್ಟ್ರೀಯ ಮಟ್ಟದ ಅಥ್ಲೇಟಿಕ್ ಚಾಂಪಿಯನ್ ಶಿಪ್ ಲ್ಲಿ 44.46 ಮೀ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಪಡೆದ ಸಿದ್ದಕಟ್ಟೆ ಗುಣಶ್ರೀ ವಿದ್ಯಾಲಯದ ವಿದ್ಯಾರ್ಥಿನಿ ರಮ್ಯಶ್ರೀ ಜೈನ್ ಅವರನ್ನು ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ, ನಿ.ಇದರ ವತಿಯಿಂದ ಸಂಘದ ಸಭಾಂಗಣದಲ್ಲಿ ಗೌರವಪೂರ್ವಕವಾಗಿ ಅಭಿನಂದಿಸಲಾಯಿತು.
ಈ ಸಂದರ್ಭ ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು, ಉಪಾಧ್ಯಕ್ಷ ಸತೀಶ್ ಪೂಜಾರಿ, ನಿರ್ದೇಶಕರಾದ ಸಂದೇಶ್ ಶೆಟ್ಟಿ, ರಾಜೇಶ್ ಶೆಟ್ಟಿ, ಮಾಧವ ಶೆಟ್ಟಿಗಾರ್, ಹರೀಶ್ ಆಚಾರ್ಯ, ದಿನೇಶ್ ಪೂಜಾರಿ, ಉಮೇಶ್ ಗೌಡ, ದೇವರಾಜ್ ಸಾಲಿಯಾನ್,ವೀರಪ್ಪ ಪರವ, ಜಾರಪ್ಪ ನಾಯ್ಕ, ಮಂದರಾತಿ ಶೆಟ್ಟಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಆರತಿ ಶೆಟ್ಟಿ, ಸಿದ್ದಕಟ್ಟೆ ಗುಣಶ್ರೀ ವಿದ್ಯಾಲಯದ ಸಂಚಾಲಕ ವಿಜಯಕುಮಾರ್ ಚೌಟ, ಮುಖ್ಯ ಶಿಕ್ಷಕಿ ಸಭಿತ ಲವೀನ ಪಿಂಟೊ ,ರಮ್ಯಶ್ರೀ ತಾಯಿ ಪದ್ಮಶ್ರೀ ಜೈನ್ ಹಾಗೂ ಸಂಘದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
Be the first to comment on "ರಾಷ್ಟ್ರೀಯ ಕ್ರೀಡಾ ಸಾಧಕಿ ರಮ್ಯಶ್ರೀ ಜೈನ್ ಅವರಿಗೆ ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದಿಂದ ಸನ್ಮಾನ"