ಜೋಡುಮಾರ್ಗ ಜೇಸಿಯಿಂದ ಕನ್ಯಾನ ಭಾರತ ಸೇವಾಶ್ರಮದಲ್ಲಿ ವಿಶ್ವ ಮಹಿಳಾ ದಿನಾಚರಣೆ

ಬಂಟ್ವಾಳ: ಜೋಡುಮಾರ್ಗ ಜೇಸಿ ನೇತ್ರಾವತಿಯಿಂದ ಬಾಳ್ತಿಲದ ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ಹಾಗೂ ಕನ್ಯಾನದ ಭಾರತ ಸೇವಾಶ್ರಮ ಸಹಯೋಗದೊಂದಿಗೆ ಸೋಮವಾರ ಕನ್ಯಾನದ ಭಾರತ ಸೇವಾಶ್ರಮದಲ್ಲಿ ವಿಶ್ವ ಮಹಿಳಾ ದಿನಾಚರಣೆ ನಡೆಸಲಾಯಿತು.

ಭಾರತ ಸೇವಾಶ್ರಮದ ಸರಿತಾ ಈಶ್ವರ ಭಟ್ ಕಾರ್ಯಕ್ರಮ ಉದ್ಘಾಟಿಸಿದರು. ಜೇಸಿ ಅಧ್ಯಕ್ಷೆ, ನ್ಯಾಯವಾದಿ ಹಾಗೂ ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆಯ ಸಂಸ್ಥಾಪಕಿ ಶೈಲಜಾ ರಾಜೇಶ್ ಅವರು ಮಹಿಳಾ ಸಶಕ್ತೀಕರಣ, ಆತ್ಮರಕ್ಷಣೆ, ದೌರ್ಜನ್ಯ ತಡೆ ಕಾಯ್ದೆ, ಮಹಿಳಾ ಹಕ್ಕು ಮತ್ತು ಕಾನೂನು ಮಾಹಿತಿ ನೀಡಿದರು.

ಈ ಸಂದರ್ಭ ಮಾಜಿ ಸೈನಿಕರ ಪತ್ನಿ ಪ್ರಮೀಳಾ, ಸಮಾಜ ಸೇವಕಿ ಸರಿತಾ ಈಶ್ವರ ಭಟ್, ಕಾರ್ಮಿಕರಾದ ಲಲಿತಾ ಅವರನ್ನು ಸನ್ಮಾನಿಸಲಾಯಿತು. ವಿವಿಧ ಆಟೋಟ ಸ್ಪರ್ಧೆಗಳು ನಡೆದವು. ಭಾರತ ಸೇವಾಶ್ರಮ ವತಿಯಿಂದ ಜೇಸಿಐ ಅಧ್ಯಕ್ಷೆ ಶೈಲಜಾ ರಾಜೇಶ್ ಅವರನ್ನು ಸನ್ಮಾನಿಸಲಾಯಿತು. ಜೇಸಿ ಕಾರ್ಯದರ್ಶಿ ಮಲ್ಲಿಕಾ ಆಳ್ವಾ,ಸದಸ್ಯರಾದ  ರಮ್ಯಾ, ಪಲ್ಲವಿ , ಅನ್ನಪೂರ್ಣ , ಭಾರತ ಸೇವಾಶ್ರಮದ ಈಶ್ವರ ಭಟ್ ಮತ್ತು ಪರಶುರಾಮ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಜೋಡುಮಾರ್ಗ ಜೇಸಿಯಿಂದ ಕನ್ಯಾನ ಭಾರತ ಸೇವಾಶ್ರಮದಲ್ಲಿ ವಿಶ್ವ ಮಹಿಳಾ ದಿನಾಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*