ಬಂಟ್ವಾಳ: ಜೆಸಿಐ ಬಂಟ್ವಾಳ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ , ಬಂಟ್ವಾಳ ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಕುಕ್ಕಿಪ್ಪಾಡಿ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಆಚರಿಸಲಾಯಿತು.
ಬಂಟ್ವಾಳ ಜೇಸಿರೆಟ್ ಅಧ್ಯಕ್ಷೆ ವಿದ್ಯಾ ಉಮೇಶ್ ಮೂಲ್ಯ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ ಮಹಿಳೆ ಸಮಾಜದ ಶಕ್ತಿ. ಇಂದಿನ ದಿನಗಳಲ್ಲಿ ಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಸಾಕಷ್ಟು ಅವಕಾಶಗಳು ಇದ್ದು ಅಂತಹ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು. ಕುಕ್ಕಿಪ್ಪಾಡಿ ಗ್ರಾ.ಪಂ. ಅಧ್ಯಕ್ಷೆ ಸುಜಾತ ರಾಜು ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿಯ ಗೆಳತಿ ವಿಭಾಗದ ಆಪ್ತ ಸಮಾಲೋಚಕಿ ಚೈತನ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜೆಸಿಐ ಬಂಟ್ವಾಳದ ಅಧ್ಯಕ್ಷ ಉಮೇಶ್ ಆರ್. ಮೂಲ್ಯ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ತುಳಸಿ, ಜೆಸಿರೆಟ್ ಸದಸ್ಯೆ ರಶ್ಮಿ ಶೆಟ್ಟಿ, ಕುಕ್ಕಿಪ್ಪಾಡಿ ಪಂಚಾಯತಿ ಸದಸ್ಯರಾದ ಕೋಮಲ, ಪ್ರತಿಭಾ, ವನಿತಾ, ಪುಷ್ಪಾ ಉಪಸ್ಥಿತರಿದ್ದರು. ಜೆಸಿಐ ಬಂಟ್ವಾಳದ ಕಾರ್ಯದರ್ಶಿ ರೋಷನ್ ರೈ, ಕೋಶಾಧಿಕಾರಿ ರವೀಣ ಬಂಗೇರ, ನಿಕಟ ಪೂರ್ವಾಧ್ಯಕ್ಷ ಸದಾನಂದ ಬಂಗೇರ, ಪೂರ್ವಾಧ್ಯಕ್ಷ ಸಂತೋಷ್ ಜೈನ್, ಸದಸ್ಯ ಕಾರ್ತಿಕ್ ರೈ, ಜೇಸಿರೆಟ್ ಸದಸ್ಯೆ ದೀಪ್ತಿ ಆರ್. ರೈ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಭಾಗವಹಿಸಿದ್ದರು. ವಲಯ ಮೇಲ್ವಿಚಾರಕಿ ಹರಿಣಾಕ್ಷಿ ರೈ ಸ್ವಾಗತಿಸಿ, ವಂದಿಸಿದರು, ಜ್ಞಾನವಿಕಾಸ ಸಮನ್ವಯಾಧಿಕಾರಿ ಸಪ್ನಾ ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿ ಹೇಮಲತಾ, ಅಂಗನವಾಡಿ ಕಾರ್ಯಕರ್ತೆ ಕುಸುಮಾವತಿ ಜೆ. ಶೆಟ್ಟಿ ಸಹಕರಿಸಿದರು.