ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಅನಾರು ಬಳಿ ಕಾಯಿಲ ಎಂಬಲ್ಲಿ ಮರವೊಂದನ್ನ ಕಡಿದು ಉರುಳಿಸುವ ವೇಳೆ ಮರದ ಅಡಿಗೆ ಸಿಲುಕಿ ಮೂವರು ಯುವಕರು ಮೃತಪಟ್ಟ ಘಟನೆ ಮಂಗಳವಾರ ಮದ್ಯಾಹ್ನ ನಡೆದಿದೆ.
ಪಟ್ರಮೆ ಗ್ರಾಮದ ನಿವಾಸಿಗಳಾದ ಪ್ರಶಾಂತ್ ಕುಂಬಾರ (23), ಸ್ವಸ್ಥಿಕ್ ಪೂಜಾರಿ (25) ಮತ್ತು ಉಪ್ಪಿನಂಗಡಿ ನಿವಾಸಿ ಗಣೇಶ್ (38) ಎಂಬವರುಗಳು ಮೃತಪಟ್ಟಿದ್ದು, ಉಳಿದ 2 ಜನ ಯಾವುದೇ ಗಾಯಗಳಿಲ್ಲದೆ ಪಾರಾಗಿರುತ್ತಾರೆ. ದೊಡ್ಡ ಗಾತ್ರದ ಧೂಪದ ಮರವೊಂದನ್ನು ಕಡಿಯುವ ವೇಳೆ ಮರ ಬಿದ್ದು ಘಟನೆ ಸಂಭವಿಸಿದೆ. ವೃತ್ತ ನಿರೀಕ್ಷಕ ಸಂದೇಶ್, .ಧರ್ಮಸ್ಥಳ ಪೋಲೀಸ್ ಠಾಣಾ ಉಪ ನಿರೀಕ್ಷಕ ಪವನ್ ನಾಯಕ್ ಅರಣ್ಯ ಇಲಾಖಾಧಿಕಾರಿಗಳು ಭೇಟಿ ನೀಡಿದ್ದಾರೆ. ಧರ್ಮಸ್ಥಳ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.
IFTAAR ORGANISED BY FORMER MINISTER RAMANATHA RAI AT PANEMANGALORE (more…)