ಬಂಟ್ವಾಳ: ತಾಲೂಕಿನ ಮಾಣಿಯಲ್ಲಿರುವ ಮಾರುಕಟ್ಟೆ ಸ್ವಚ್ಛತೆಗೆ ಸೂಕ್ತ ಯೋಜನೆ ರೂಪಿಸಲಾಗುವುದು ಎಂದು ಗ್ರಾಪಂ ಅಧ್ಯಕ್ಷ ಕೆ. ಬಾಲಕೃಷ್ಣ ಆಳ್ವ ಹೇಳಿದ್ದಾರೆ.
ಮಾಣಿ ಗ್ರಾಮ ಪಂಚಾಯತ್ ನ ಮಾರ್ಚ್ ತಿಂಗಳ ಸಾಮಾನ್ಯ ಸಭೆ ಪಂಚಾಯತ್ ಸಭಾಂಗಣದಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಾಲಕೃಷ್ಣ ಆಳ್ವ ಕೊಡಾಜೆ ವಹಿಸಿದ್ದರು. ಈ ಸಂದರ್ಭ ಮಾಣಿ ಪೇಟೆ ಮತ್ತು ಸಂತೆ ಮಾರುಕಟ್ಟೆ ವಠಾರದ ಸ್ವಚ್ಛತೆಯ ಕುರಿತು ಸದಸ್ಯ ಸುದೀಪ್ ಕುಮಾರ್ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಅಧ್ಯಕ್ಷರು, ಮುಂದಿನ ದಿನಗಳಲ್ಲಿ ಈ ಕುರಿತು ಸೂಕ್ತ ಯೋಜನೆ ರೂಪಿಸಲಾಗುವುದು ಎಂದರು.
ಹಿಂದಿನ ತಿಂಗಳ ಸಭೆಯ ವರದಿ, ವಿವಿಧ ಇಲಾಖೆಗಳ ಮಹಿತಿ, ಅರ್ಜಿಗಳ ವಿಲೇವಾರಿಗಳನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ ಗಟ್ಟಿಯವರು ನಡೆಸಿಕಟ್ಟರು. ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ ಮಾಧವ ಮಾವೆ, ತಾಲೂಕು ಪಂಚಾಯತ್ ಸದಸ್ಯೆ ಮಂಜುಳಾ ಕುಶಲ ಪೆರಾಜೆ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರಾದ ಸುದೀಪ್ ಕುಮಾರ್ ಶೆಟ್ಟಿ, ಇಬ್ರಾಹಿಂ.ಕೆ.ಮಾಣಿ, ನಾರಾಯಣ ಶೆಟ್ಟಿ ತೋಟ, ಮೆಲ್ವಿನ್ ಕಿಶೋರ್ ಮಾರ್ಟಿಸ್, ರಮಣಿ.ಡಿ.ಪೂಜಾರಿ, ಸೀತಾ, ಸುಜಾತಾ, ಮಿತ್ರಾಕ್ಷಿ ಉಪಸ್ಥಿತರಿದ್ದರು. ಸಭೆಯಲ್ಲಿ ಗ್ರಾಮಕ್ಕೆ ಸಂಬಂಧಪಟ್ಟ ಹಲವು ಕಾರ್ಯಯೋಜನೆಗಳ ಬಗ್ಗೆ ರೂಪುರೇಶೆಗಳನ್ನು ಮಾಡಿ ಚರ್ಚಿಸಲಾಯಿತು.