ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ವತಿಯಿಂದ ಮೈಸೂರಿನಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ 36ನೇ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಮಂಗಳೂರಿನ ಅನಘಾ ಎರಡು ಚಿನ್ನದ ಪದಕ ಹಾಗೂ ಒಂದು ಬೆಳ್ಳಿ ಪದಕ ಪಡೆದು ರಾಷ್ಟ್ರಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿದ್ದಾರೆ.
ಮೈಸೂರಿನ ರಾವ್ಸ್ ಸ್ಕೇಟಿಂಗ್ ರಿಂಕ್ ನಲ್ಲಿ ಮಾರ್ಚ್ 4 ರಿಂದ 7 ರವರೆಗೆ ನಡೆದ ಸ್ಕೇಟಿಂಗ್ ಚಾಂಪಿಯನ್ ಶಿಪ್ ನ 9 ರಿಂದ 11 ವರ್ಷದ ಬಾಲಕಿಯರ ವಿಭಾಗದಲ್ಲಿ 1ಲ್ಯಾಪ್ ರೋಡ್ ರೇಸ್ ಹಾಗೂ 1,000 ಮೀಟರ್ ರಿಂಕ್ ರೇಸ್ ನಲ್ಲಿ ತಲಾ ಎರಡು ಚಿನ್ನದ ಪದಕ ಹಾಗೂ 500 ಮೀಟರ್ ರಿಂಕ್ ರೇಸ್ ನಲ್ಲಿ ಬೆಳ್ಳಿ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಪಂಜಾಬ್ ನ ಮೊಹಾಲಿಯಲ್ಲಿ ಎಪ್ರಿಲ್1 ರಿಂದ 4 ರವರೆಗೆ ನಡೆಯಲಿರುವ ರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಅನಘಾ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.
ಮಂಗಳೂರಿನ ಕದ್ರಿ ಹಿಲ್ಸ್ ನಿವಾಸಿ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ಅವರ ಪುತ್ರಿಯಾದ ಅನಘಾ ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ನ 5 ನೇ ತರಗತಿ ವಿದ್ಯಾರ್ಥಿನಿ.
ಮಂಗಳೂರಿನ ಹೈಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ನ ಸದಸ್ಯೆಯಾಗಿರುವ ಅನಘಾ ತರಬೇತುದಾರರಾದ ಮೋಹನ್ ದಾಸ್.ಕೆ ಹಾಗೂ ಜಯರಾಜ್ ತರಬೇತಿ ಪಡೆಯುತ್ತಿದ್ದು, ಬೆಂಗಳೂರಿನ ತರಬೇತುದಾರರಾದ ಏಕಲವ್ಯ ಪ್ರಶಸ್ತಿ ವಿಜೇತ ಪ್ರತೀಕ್ ರಾಜ ಅವರಿಂದ ಹೆಚ್ಚಿನ ತರಬೇತಿ ಪಡೆಯುತ್ತಿದ್ದಾರೆ
| ಸಾಹಿತ್ಯದಿಂದ ಸಾಮರಸ್ಯ ಆಶಯ | ಎರಡು ದಿನ ವಿಚಾರ ಮಂಡನೆ, ಸಾಂಸ್ಕೃತಿಕ ಕಾರ್ಯಕ್ರಮ (more…)