ಮಂಗಳೂರು: ಬಿಜೆಪಿಯ ಜಿಲ್ಲಾ ಮಟ್ಟದ ಎಸ್ಸಿ ಮೋರ್ಚಾ ಕಾರ್ಯಕಾರಿಣಿ ಸಭೆ ಮಂಗಳೂರಿನಲ್ಲಿ ನಡೆಯಿತು.
ಬಿಜೆಪಿ ರಾಜ್ಯ ವಕ್ತಾರರಾದ ಹಾಗೂ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ಛಲವಾದಿ ನಾರಾಯಣಸ್ವಾಮಿ ಅವರು ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಾಯಕರ ಸರ್ವಾಧಿಕಾರಿ ಧೋರಣೆಯಿಂದಾಗಿ, ಬಿಜೆಪಿಯವರು ದಲಿತ ವಿರೋಧಿ ಎಂದು ಆರೋಪ ಮಾಡುತ್ತಿದ್ದವು. ಆದರೆ ಬಿಜೆಪಿ ಅದಕ್ಕೆ ತನ್ನ ಕಾರ್ಯ ಚಟುವಟಿಕೆಗಳ ಮೂಲಕ ತಕ್ಕ ಉತ್ತರ ಕೊಟ್ಟಿದೆ. ಚಾಯ್ ಮಾರಾಟ ಮಾಡುವವರು ಪ್ರಧಾನಿಯಾಗಬಹುದು ಎಂಬುದನ್ನು ತೋರಿಸಿಕೊಟ್ಟಿದೆ. ದೇಶದಲ್ಲಿ ಪರಿಶಿಷ್ಟ ಜಾತಿ ಸಮುದಾಯ ಬಿಜೆಪಿಯತ್ತ ಮುಖ ಮಾಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತ ಹಾಗೂ ಮೋದಿಯವರ ಜನಪರ ಕಾರ್ಯಚಟುವಟಿಕೆ ಕಾರ್ಯಬದ್ಧತೆ ಹಾಗೂ ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸೇರಿ ಸಂಘಟನೆಯ ಜೊತೆ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು 370ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ ಜಮ್ಮು-ಕಾಶ್ಮೀರದಲ್ಲಿನ ಪರಿಶಿಷ್ಟರಿಗೆ 72 ವರ್ಷದ ಬಳಿಕ ಮೀಸಲಾತಿ ಸಿಕ್ಕಿದೆ. ಈ ಮೂಲಕ ಬಿಜೆಪಿ ಮೀಸಲಾತಿ ಸವಿಂಧಾನದ ಪರವಾಗಿದ್ದು, ಅಂಬೇಡ್ಕರ್ ಆಶಯಗಳನ್ನು ಪ್ರತಿಬಿಂಬಿಸಿದೆ ಎಂದ ಅವರು, ಮೀಸಲಾತಿಯನ್ನು ಯಾವತ್ತೂ ರದ್ದುಗೊಳಿಸುವುದು ಇಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ಸುಳ್ಳು ಹೇಳುವವರಿಗೆ ಉತ್ತರ ನೀಡಿದೆ ಎಂದರು,
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ವಿನಯನೇತ್ರ ದಡ್ಡಲಕಾಡು ಅಧ್ಯಕ್ಷತೆಯಲ್ಲಿ ಸಭೆ ನೆರವೇರಿತು.
ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ, ಭಾಜಪ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಬಾಬು, ರಾಜ್ಯ ಕೋಶ ಅಧ್ಯಕ್ಷರಾದ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಎಸ್ ಸಿ ಮೋರ್ಚಾ ಪ್ರಭಾರಿ ನಾಗೇಶ್, ಭಾಜಪ ರಾಜ್ಯ ಎಸ್ ಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯರು ಹಾಗೂ ಉಡುಪಿ ಹಾಸನ ಜಿಲ್ಲಾ ಪ್ರಭಾರಿ ಗಳಾದ ದಿನೇಶ್ ಅಮ್ಟೂರು ಪಕ್ಷ ಸಂಘಟನೆಯ ಬಗ್ಗೆ ಮಾರ್ಗದರ್ಶನ ಮಾಡಿದರು.
ಭಾಜಪ ಜಿಲ್ಲಾ ಕಾರ್ಯದರ್ಶಿ ಎಸ್ಸಿ ಮೋರ್ಚಾದ ಜಿಲ್ಲಾ ಪ್ರಭಾರಿ ಮಂಗಳ ಆಚಾರ್ಯ, ಜಿಲ್ಲಾ ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಅಣ್ಣಿ ಎಳ್ತಿ ಮಾರ್ ಮಂಡಲಗಳ ವರದಿ ಪಡೆದುಕೊಂಡರು.
ಸಭೆಯಲ್ಲಿ ಜಿಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಗೂ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು ಜಿಲ್ಲಾ ಸಮಿತಿ ಸದಸ್ಯರಾದ ಕೇಶವ ಕನ್ಯಾಡಿ ವಂದೇ ಮಾತರಂ ಗೀತೆಯನ್ನು ಹಾಡಿದರು ಹಾಗೂ ನಿರೂಪಣೆ ಗೈದರು ಪ್ರಧಾನ ಕಾರ್ಯದರ್ಶಿ ಭೋಜ ಕೋಟ್ಯಾನ್ ಸ್ವಾಗತಿಸಿದರು ಹಾಗೂ ವಂದಿಸಿದರು