ಬಂಟ್ವಾಳ: ಬಿ.ವಿ.ಕಾರಂತ ನೆನಪಿನ ನಾಟಕೋತ್ಸವಕ್ಕೆ ಮಂಚಿಯ ನೂಜಿಬೈಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ರಾತ್ರಿ ಚಾಲನೆ ದೊರಕಿತು. ಉದ್ಘಾಟನಾ ಸಮಾರಂಭದ ಬಳಿಕ ರಂಗಾಯಣದ ನಾಟಕ ಚಾಣಕ್ಯ ಪ್ರಪಂಚ ಪ್ರದರ್ಶನಗೊಂಡಿತು.
ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ಮಂಚಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಯೋಗದಲ್ಲಿ ಆರಂಭಗೊಂಡ ಬಿ.ವಿ.ಕಾರಂತ ನೆನಪಿನ ‘ಮಂಚಿ ನಾಟಕೋತ್ಸವವನ್ನು ವಿಟ್ಲ ಜೂನಿಯರ್ ಕಾಲೇಜಿನ ನಿವೃತ್ತ ಪ್ರಿನ್ಸಿಪಾಲ್ ಎಂ.ಅನಂತಕೃಷ್ಣ ಹೆಬ್ಬಾರ್ ಉದ್ಘಾಟಿಸಿದರು.
ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು ಮಂಚಿ ನೂಜಿಬೈಲ್ ಅನುದಾನಿತ ಹಿ.ಪ್ರಾ. ಶಾಲೆಯ ಸಂಚಾಲಕಿ ನೂಜಿಬೈಲ್ ಶಾಂತಲಾ ಎನ್. ಭಟ್, ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ಅಧ್ಯಕ್ಷ ಕಜೆ ರಾಮಚಂದ್ರ ಭಟ್ ಉಪಸ್ಥಿತರಿದ್ದರು. ಟ್ರಸ್ಟ್ ಉಪಾಧ್ಯಕ್ಷರಾದ ಗಣೇಶ್ ಐತಾಳ್ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಉಮಾನಾಥ ರೈ ವಂದಿಸಿದರು. ಕಾರ್ಯದರ್ಶಿ ರಮಾನಂದ ನೂಜಿಪ್ಪಾಡಿ ಕಾರ್ಯಕ್ರಮ ನಿರ್ವಹಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…