ಸಾಂಸ್ಕೃತಿಕ

ಬಿ.ವಿ.ಕಾರಂತ ನೆನಪಿನ ನಾಟಕೋತ್ಸವಕ್ಕೆ ಚಾಲನೆ, ಮೊದಲ ದಿನ ಗಮನ ಸೆಳೆದ ರಂಗಾಯಣದ ಚಾಣಕ್ಯ ಪ್ರಪಂಚ

ಬಂಟ್ವಾಳ: ಬಿ.ವಿ.ಕಾರಂತ ನೆನಪಿನ ನಾಟಕೋತ್ಸವಕ್ಕೆ ಮಂಚಿಯ ನೂಜಿಬೈಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ರಾತ್ರಿ ಚಾಲನೆ ದೊರಕಿತು. ಉದ್ಘಾಟನಾ ಸಮಾರಂಭದ ಬಳಿಕ ರಂಗಾಯಣದ ನಾಟಕ ಚಾಣಕ್ಯ ಪ್ರಪಂಚ ಪ್ರದರ್ಶನಗೊಂಡಿತು.

ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ಮಂಚಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಯೋಗದಲ್ಲಿ ಆರಂಭಗೊಂಡ ಬಿ.ವಿ.ಕಾರಂತ ನೆನಪಿನ ‘ಮಂಚಿ ನಾಟಕೋತ್ಸವವನ್ನು ವಿಟ್ಲ ಜೂನಿಯರ್ ಕಾಲೇಜಿನ ನಿವೃತ್ತ ಪ್ರಿನ್ಸಿಪಾಲ್ ಎಂ.ಅನಂತಕೃಷ್ಣ ಹೆಬ್ಬಾರ್ ಉದ್ಘಾಟಿಸಿದರು.

ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು ಮಂಚಿ ನೂಜಿಬೈಲ್ ಅನುದಾನಿತ ಹಿ.ಪ್ರಾ. ಶಾಲೆಯ ಸಂಚಾಲಕಿ  ನೂಜಿಬೈಲ್ ಶಾಂತಲಾ‌ ಎನ್. ಭಟ್, ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ಅಧ್ಯಕ್ಷ ಕಜೆ ರಾಮಚಂದ್ರ ಭಟ್  ಉಪಸ್ಥಿತರಿದ್ದರು. ಟ್ರಸ್ಟ್ ಉಪಾಧ್ಯಕ್ಷರಾದ ಗಣೇಶ್ ಐತಾಳ್ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಉಮಾನಾಥ ರೈ ವಂದಿಸಿದರು. ಕಾರ್ಯದರ್ಶಿ ರಮಾನಂದ ನೂಜಿಪ್ಪಾಡಿ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ