ಜ್ಯೋತಿಷ್ಯ ಹೇಳುತ್ತಿದ್ದ ವ್ಯಕ್ತಿಗೆ ಹಲ್ಲೆ, ಬಿ.ಸಿ.ರೋಡಿನಲ್ಲಿ ಹಗಲೇ ನಡೆದ ಘಟನೆ

ಮಹಿಳೆ ಮತ್ತು ಪುರುಷ ಆಗಮಿಸಿ ರಾಡ್ ನಿಂದ ಹಲ್ಲೆ ನಡೆಸಿದ್ದಾಗಿ ದೂರು

ಬಂಟ್ವಾಳ: ಬಿ.ಸಿ.ರೋಡಿನ ವಾಣಿಜ್ಯ ಸಂಕೀರ್ಣವೊಂದರಲ್ಲಿ ಲಕ್ಷ್ಮೀಕಾಂತ ಭಟ್ ಹೆಸರಲ್ಲಿ ಜ್ಯೋತಿಷ್ಯ ಹೇಳುವುದಾಗಿ ಕಾರ್ಯನಿರ್ವಹಿಸುತ್ತಿದ್ದ ಬಾಗಲಕೋಟೆ ಮೂಲದ ಪುಂಡಲೀಕ ಹನುಮಂತಪ್ಪ ನಾಯ್ಕರ್ ಎಂಬವರಿಗೆ ಶನಿವಾರ ಮಧ್ಯಾಹ್ನ ಸುಮಾರು 3 ಗಂಟೆ ವೇಳೆ ಇಬ್ಬರು ಆಗಮಿಸಿ ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ಜ್ಯೋತಿಷಿ ಮಂಗಳೂರಿನ ಆಸ್ಪತ್ರೆಗೆ ದಾಖಲಾದರು. ಬಂಟ್ವಾಳ ನಗರ ಠಾಣೆ ಇನ್ಸ್ ಪೆಕ್ಟರ್ ಚೆಲುವರಾಜು, ಅಪರಾಧ ವಿಭಾಗ  ಎಸ್.ಐ. ಕಲೈಮಾರ್ ನೇತೃತ್ವದಲ್ಲಿ ಪೊಲೀಸರು ತನಿಖೆ ನಡೆಸಿದ್ದು, ಬಂಟ್ವಾಳ ನಗರ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಘಿದೆ.

ಬಿ.ಸಿ.ರೋಡಿನ ಪದ್ಮಾ ಕಾಂಪ್ಲೆಕ್ಸನಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ಜ್ಯೋತಿಷಾಲಯದ ಪಂಡಿತ್ ಲಕ್ಮೀಕಾಂತ್ ಭಟ್ ಹೆಸರಲ್ಲಿ ಕಾರ್ಯಾಚರಿಸುತ್ತಿದ್ದ ಈ ಜ್ಯೋತಿಷಿಗೆ ಮೂಡುಬಿದಿರೆಯಿಂದ ಆಗಮಿಸಿದ್ದಾಗಿ ಹೇಳಿ ಮಧ್ಯಾಹ್ನ ಮಹಿಳೆ ಮತ್ತು ಪುರುಷನೊಬ್ಬ ಆಗಮಿಸಿ ಜ್ಯೋತಿಷ ಕೇಳುವ ನೆಪದಲ್ಲಿ ಬಂದಿದ್ದರು. ಈ ವೇಳೆ ಜ್ಯೋತಿಷಿಗೆ ರಾಡ್ ನಿಂದ ಹಲ್ಲೆಗೈದಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಸದ್ಯ ಘಟನೆಯ ವಿವರಗಳನ್ನು ಪೊಲೀಸರು ಕಲೆ ಹಾಕುತ್ತಿದ್ದು, ತನಿಖೆ ನಡೆಯುತ್ತಿದೆ.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಜ್ಯೋತಿಷ್ಯ ಹೇಳುತ್ತಿದ್ದ ವ್ಯಕ್ತಿಗೆ ಹಲ್ಲೆ, ಬಿ.ಸಿ.ರೋಡಿನಲ್ಲಿ ಹಗಲೇ ನಡೆದ ಘಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*