ಬಂಟ್ವಾಳ: ದಕ್ಷಿನ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರು ಶನಿವಾರ ಬಂಟ್ವಾಳ ತಾಲೂಕಿನ ವಿಟ್ಲಪಡ್ನೂರು ಗ್ರಾಮದಲ್ಲಿ ಗ್ರಾಮವಾಸ್ತವ್ಯ ಮಾಡಿದ್ದು, ಈ ಸಂದರ್ಭ ಸುಮಾರು 70ಕ್ಕೂ ಅಧಿಕ ಅರ್ಜಿಗಳು ಬಂದಿದ್ದು, 30 ಅರ್ಜಿಗಳನ್ನು ಸ್ಥಳದಲ್ಲೇ ಇತ್ಯರ್ಥಗೊಳಿಸಲಾಗಿದೆ. ಸ್ವೀಕರಿಸಿದ ಅಹವಾಲು, ಸಮಸ್ಯೆಗಳ ಕುರಿತ ವರದಿಯನ್ನು ಎರಡು ವಾರದೊಳಗೆ ನೀಡುವಂತೆ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಕಡಬದಲ್ಲಿ ಪ್ರಾಯೋಗಿಕವಾಗಿ ನಡೆದ ಕಾರ್ಯಕ್ರಮ ಹಾಗೂ ಬೆಳ್ತಂಗಡಿಯ ಶಿಶಿಲದಲ್ಲಿ ಮಾಡಿದಾಗ ಶೇ.೬೦-೭೦ರಷ್ಟು ಅರ್ಜಿಗಳು ಗ್ರಾಮ ವಾಸ್ತವ್ಯಕ್ಕೆ ಮುಂಚಿತವಾಗಿಯೇ ಅರ್ಜಿಗಳು ವಿಲೇವಾರಿಯಾಗಿದೆ ಎಂದು ಈ ಸಂದರ್ಭ ಜಿಲ್ಲಾಧಿಕಾರಿ ಉದ್ಘಾಟನಾ ಭಾಷಣದಲ್ಲಿ ಹೇಳಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮಾತನಾಡಿ, ವಿಟ್ಲದ ಪಡ್ನೂರು ಗ್ರಾಮ ಜನರಿಗೆ ಮೂಲಸೌಕರ್ಯಗಳನ್ನು ಒಡಗಿಸುವುದರೊಂದಿಗೆ ಜನರ ಸಮಸ್ಯೆಗಳನ್ನು ಆಲಿಸಿ ಅವರಿಗೆ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿಯೆಡೆಗೆ ಕಾರ್ಯಕ್ರಮವು ಬಹಳ ಪ್ರಯೋಜನಕಾರಿಯಾಗಿದೆ ಎಂದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ ಮಾಧವ ಮಾವೆ, ಬಂಟ್ವಾಳ ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೆರಾ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಸದಸ್ಯೆ ಶೋಭಾ ರೈ, ಪಡ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಶ್ಮಾ ಶಂಕರಿ, ಉಪಾಧ್ಯಕ್ಷ ನಾಗೇಶ್ ಮೊದಲಾದವರು ಉಪಸ್ಥಿತರಿದ್ದರು. ಮಂಜು ವಿಟ್ಲ ಕಾರ್ಯಕ್ರಮ ನಿರೂಪಿಸಿದರು.
Be the first to comment on "ವಿಟ್ಲಪಡ್ನೂರಿನಲ್ಲಿ ಡಿಸಿ ಗ್ರಾಮವಾಸ್ತವ್ಯ, 30 ಅರ್ಜಿಗಳು ಸ್ಥಳದಲ್ಲೇ ಇತ್ಯರ್ಥ, ಶೀಘ್ರ ಉಳಿದವುಗಳ ಪ್ರಗತಿ ವಿವರ ಸಲ್ಲಿಕೆಗೆ ಸೂಚನೆ"