ಕಲ್ಲಡ್ಕ

ಎಂಆರ್ ಪಿಎಲ್ ಅನುದಾನ: ಕಲ್ಲಡ್ಕ ಸರ್ಕಾರಿ ಶಾಲೆಯಲ್ಲಿ ನವೀಕೃತ ಕಟ್ಟಡ ಉದ್ಘಾಟನೆ

ಬಂಟ್ವಾಳ: ಕಲ್ಲಡ್ಕದ ದ.ಕ.ಜಿ.ಪಂ.ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂ.ಆರ್.ಪಿ.ಎಲ್.ನ ಸಿ.ಎಸ್.ಆರ್.ನಿಧಿಯಿಂದ ಸುಮಾರು 63.2 ಲಕ್ಷ ರೂ ಅನುದಾನ ಮೊತ್ತದಲ್ಲಿ ನಿರ್ಮಾಣಗೊಂಡ ನೂತನ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ಹಾಗೂ ಶತಮಾನೋತ್ತರ ಬೆಳ್ಳಿಹಬ್ಬ ಸಮಾರಂಭ ಶನಿವಾರ ನಡೆಯಿತು.

ಎಂ.ಆರ್.ಪಿ.ಎಲ್. ಸಿ.ಎಸ್.ಆರ್. ವಿಭಾಗದ ಜನರಲ್ ಮ್ಯಾನೇಜರ್ ಸುಬ್ರಾಯ ಭಟ್ ಕೊಠಡಿಗಳನ್ನು ಉದ್ಘಾಟಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹಾಗೂ ಶಾಲೆಯ ಹಳೇ ವಿದ್ಯಾರ್ಥಿ ಡಾ.ಕಲ್ಲಡ್ಕ ಪ್ರಭಾಕರ ಭಟ್ ಕಾರ್ಯಕ್ರಮವನ್ನು ದೀಪೋಜ್ವಲನ ಮಾಡಿ ಉದ್ಘಾಟಿಸಿ ಮಾತನಾಡಿ, ದೇಶಭಕ್ತಿಯನ್ನು ಪ್ರೇರೇಪಿಸುವ , ಜೀವನದಲ್ಲಿ ಸ್ವಾವಲಂಬಿಯನ್ನಾಗಿಸುವ ಶಿಕ್ಷಣ ಇಂದು ಅಗತ್ಯ. ಇಂದು ಮಕ್ಕಳನ್ನು ಭವಿಷ್ಯದ ಉತ್ತಮ ಪ್ರಜೆಗಳನ್ನಾಗಿಸುವ ಕಾರ್ಯವನಮ್ನು ಶಿಕ್ಷಕರು ಮಾಡಬೇಕು. ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಅಬುಬಕರ್ ಅಶ್ರಫ್ ಅವರ ಸೇವೆ ಈ ನಿಟ್ಟಿನಲ್ಲಿ ಅನನ್ಯ ಎಂದರು.

ಅಧ್ಯಕ್ಷತೆಯನ್ನು ವಹಿಸಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ ಶಾಲೆಗಳ ಅಭಿವೃದ್ಧಿಗೆ ಸರ್ವನೆರವು ನೀಡುವುದಾಗಿ ಘೋಷಿಸಿ ಶುಭ ಹಾರೈಸಿದರು.

ಜಾಹೀರಾತು

ಶಾಲಾ ಹಳೇ ವಿದ್ಯಾರ್ಥಿಗಳೂ ಆಗಿರುವ ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ ಮತ್ತು ಪದ್ಮನಾಭ ಕೊಟ್ಟಾರಿ ಶುಭಾಶಂಸನೆಗೈದರು. ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಜಿಪಂ ಸದಸ್ಯೆ ಕಮಲಾಕ್ಷಿ ಪೂಜಾರಿ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ತಾಪಂ ಸದಸ್ಯ ಮಹಾಬಲ ಆಳ್ವ, ಗೋಳ್ತಮಜಲು ಗ್ರಾಪಂ ಅಧ್ಯಕ್ಷ ಅಭಿಷೇಕ್ ಎನ್, ಉಪಾಧ್ಯಕ್ಷೆ ಲಕ್ಷ್ಮೀ ವಿ.ಪ್ರಭು, ಉದ್ಯಮಿಗಳಾದ ಜಿ. ಅಬುಬಕ್ಕರ್, ಸಂತೋಷ್ ಶೆಟ್ಟಿ ಅರೆಬೆಟ್ಟು, ಪ್ರಮುಖರಾದ ಸುಲೋಚನಾ ಜಿ.ಕೆ.ಭಟ್, ದಾನಿ ರಮೇಶ್ ಪ್ರಭು, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧಿಕಾರಿ ಸುಜಾತಾ ಕುಮಾರಿ, ಶತಮಾನೋತ್ತರ ಬೆಳ್ಳಿಹಬ್ಬ ಸಮಿತಿ ಅಧ್ಯಕ್ಷ ನಾಗೇಶ್ ಕೆ., ಕಾರ್ಯದರ್ಶಿ ಯತಿನ್ ಕುಮಾರ್, ಎಸ್.ಡಿ.ಎಂ.ಸಿ. ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಡಾ ಸುರೇಶ್  ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಅಬುಬಕ್ಕರ್ ಅಶ್ರಫ್ ಸ್ವಾಗತಿಸಿದರು. ಸಮಿತಿಯ ವಜ್ರನಾಥ ಕಲ್ಲಡ್ಕ ವಂದಿಸಿದರು.  ಎಸ್.ಡಿ.ಎಂ.ಸಿ. ಅಧ್ಯಕ್ಷ ರಾಜೇಶ್ ಕೊಟ್ಟಾರಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ