ಬಂಟ್ವಾಳ

ಎಬಿವಿಪಿಯಿಂದ ಬಂಟ್ವಾಳದಲ್ಲಿ ಜಾಥಾ, ಬಲಿದಾನದ ಸ್ಮರಣೆ

ಬಂಟ್ವಾಳ: ಭಗತ್ ಸಿಂಗ್, ರಾಜ್ ಗುರು ಹಾಗೂ ಸುಖ್‌ದೇವ್ ಬಲಿದಾನದ ಸ್ಮರಣಾರ್ಥ ಬಂಟ್ವಾಳ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮಂಗಳವಾರ ಬಿ.ಸಿ.ರೋಡಿನ ಕೈಕಂಬದಿಂದ ಬೃಹತ್ ಕಾಲ್ನಡಿಗೆ ಜಾಥಾ ಹಾಗೂ ಸ್ಪರ್ಶ ಕಲಾಮಂದಿರದಲ್ಲಿ ಸಾರ್ವಜನಿಕ ಸಭೆ ನಡೆಯಿತು.

ಕಾರ್ಯಕ್ರಮದಲ್ಲಿ ವಕೀಲ ಹಾಗೂ ಹಿರಿಯ ಆರೆಸ್ಸೆಸ್ ಮುಖಂಡ ಪ್ರಸಾದ್‌ಕುಮಾರ್ ರೈ ಮಾತನಾಡಿ, ಪ್ರಾಣವನ್ನು ಅರ್ಪಿಸಿದ ಭಗತ್ ಸಿಂಗ್‌ ರಕ್ತದಲ್ಲಿಯೇ ಸ್ವಾತಂತ್ರ್ಯ ಹೋರಾಟದ ಕಿಚ್ಚು ಇತ್ತು ಎಂದರು.

ಮಂಗಳೂರು ಕಾಲೇಜು ಶಿಕ್ಷಣದ ಜಂಟಿ ನಿರ್ದೇಶಕರ ಕಚೇರಿಯ ವಿಶೇಷ ಅಧಿಕಾರಿ ದೇವಿಪ್ರಸಾದ್ ಮಾತನಾಡಿ, ಭಗತ್ ಆದರ್ಶದೊಂದಿಗೆ ನಾವು ಕೂಡ ದೇಶಕ್ಕೆ ಸೇವೆ ನೀಡಲು ಸಂಕಲ್ಪ ಕೈಗೊಳ್ಳಬೇಕಿದೆ ಎಂದರು.
ನಿವೃತ್ತ ಪ್ರಾಧ್ಯಾಪಕ ಪ್ರೊ. ನಾರಾಯಣ ಭಂಡಾರಿ, ಎಬಿವಿಪಿ ಜಿಲ್ಲಾ ಸಂಚಾಲಕ ಹರ್ಷಿತ್ ಕೊಯಿಲ, ತಾಲೂಕು ಸಂಚಾಲಕ ಅಖಿಲೇಶ್ ಉಪಸ್ಥಿತರಿದ್ದರು. ವಿಭಾಗ ಸಂಚಾಲಕ ಸಂದೇಶ್ ರೈ ಮಜಕ್ಕಾರು ಪ್ರಸ್ತಾವನೆಗೈದರು. ಗುರುಪ್ರಸಾದ್ ಸಿದ್ದಕಟ್ಟೆ ಸ್ವಾಗತಿಸಿದರು. ದಿನೇಶ್ ಕೊಯಿಲ ವಂದಿಸಿದರು. ಪ್ರಜ್ವಲ್ ಸಿದ್ದಕಟ್ಟೆ ಕಾರ್ಯಕ್ರಮ ನಿರ್ವಹಿಸಿದರು. ಸಭಾ ಕಾರ್ಯಕ್ರಮಕ್ಕೆ ಮೊದಲು ಕೈಕಂಬದಿಂದ ಜಾಥಾ ನಡೆಯಿತು. ಕಾರ್ಯಕ್ರಮದಲ್ಲಿ ಎಬಿವಿಪಿಯ ಮುಖಂಡರುಗಳಾದ ಬಸವೇಶ್ ಕೇೂರಿ ಮಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿ,ಬಂಟ್ವಾಳ ತಾಲೂಕು ಸಂಚಾಲಕರಾದ ದಿನೇಶ್ ಕೊಯಿಲ, ಸಹಸಂಚಾಲಕರಾದ ಅಖಿಲಾಷ್, ನಗರ ಕಾರ್ಯದರ್ಶಿಗಾಳಾದ ನಾಗರಾಜ್ ಶೆಣೈ, ಇದ್ದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.