ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಗೊಳಪಡುವ ಬಿ.ಮೂಡ ಗ್ರಾಮದ ಕಾಮಾಜೆ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ಸೇಸಪ್ಪ ಮೂಲ್ಯ ಎಂಬವರ ಮನೆಗೆ ದಿಢೀರ್ ಬೆಂಕಿ ತಗಲಿದೆ. ವಿಷಯ ತಿಳಿದು ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಸಫಲರಾದರು. ಮನೆ ಒಳಗಿನ ಕೆಲವು ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿದ್ದು ಸ್ಥಳಕ್ಕೆ ಕಂದಾಯದಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಮಹಜರು ನಡೆಸಿದರು. ಈ ಸಂದರ್ಭದಲ್ಲಿ ಬೂಡ ಸದಸ್ಯ ಭಾಸ್ಕರ ಕಾಮಾಜೆ ಸ್ಥಳದಲ್ಲಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…