ಬಂಟ್ವಾಳ

2 ಕೋಟಿ ರೂ ವೆಚ್ಚದ ಬಿ.ಸಿ.ರೋಡಿನ 190 ಮೀಟರ್ ರಸ್ತೆ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿ

ಭೂಅಭಿವೃದ್ಧಿ ಬ್ಯಾಂಕ್ ಎದುರಿನಿಂದ ಮಿನಿ ವಿಧಾನಸೌಧದ ವರೆಗೆ ಕಾಮಗಾರಿ

1 / 7

ಬಂಟ್ವಾಳ: ಬಿ.ಸಿ.ರೋಡ್ ಭೂಅಭಿವೃದ್ಧಿ ಬ್ಯಾಂಕ್ ಎದುರಿನಿಂದ ಮಿನಿ ವಿಧಾನಸೌಧದ ವರೆಗೆ 190 ಮೀಟರ್ ರಸ್ತೆ 2 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿಯಾಗುತ್ತಿದ್ದು, ಒಂದು ಪಾರ್ಶ್ವದ ಕಾಂಕ್ರೀಟ್ ಕಾಮಗಾರಿ ಭರದಿಂದ ಸಾಗುತ್ತಿದೆ. ಮಾರ್ಚ್ 3ರಂದು ಈ ರಸ್ತೆ ಕಾಮಗಾರಿಗೆ ಶಾಸಕ ರಾಜೇಶ್ ನಾಯ್ಕ್ ಶಿಲಾನ್ಯಾಸ ನೆರವೇರಿಸಿದ್ದರು. 190 ಮೀಟರ್ ರಸ್ತೆ ಅಭಿವೃದ್ಧಿಗೊಳ್ಳಲಿದೆ. 10ರಿಂದ 11 ಮೀಟರ್ ಅಗಲಕ್ಕೆ ಕಾಂಕ್ರೀಟ್ ಹಾಕುವ ಕಾರ್ಯ ನಡೆಯಲಿದೆ. 190 ಮೀಟರ್ ಉದ್ದಕ್ಕೆ ಕಾಂಕ್ರೀಟ್ ಚರಂಡಿ ನಿರ್ಮಾಣವನ್ನೂ ಮಾಡಲಾಗುತ್ತದೆ. 1.5 ಮೀಟರ್ ಅಗಲದ ಎರಡು ಅಡ್ಡ ಮೋರಿಗಳ ನಿರ್ಮಾಣವೂ ಇಲ್ಲಿ ಆಗಲಿದೆ, ಹೈಮಾಸ್ಟ್ ದೀಪಗಳನ್ನು ಅಳವಡಿಸುವುದು ಹಾಗೂ ರಸ್ತೆ ಸುರಕ್ಷತಾ ಕ್ರಮಗಳನ್ನು ಒದಗಿಸಲು 2 ಕೋಟಿ ರೂ ಮಂಜೂರುಗೊಂಡಿದ್ದು, ಇದರನ್ವಯ ಕಾಮಗಾರಿ ನಡೆಯಲಿದೆ ಎಂದು ಶಿಲಾನ್ಯಾಸ ಸಂದರ್ಭ ಮಾಹಿತಿ ನೀಡಲಾಗಿತ್ತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts