ಬಂಟ್ವಾಳ

ಬಂಟ್ವಾಳದಲ್ಲಿ ಸೌತ್ ಕೆನರಾ ಫೊಟೋಗ್ರಾಫರ್ಸ್ ಎಸೋಸಿಯೇಶನ್ ವಾರ್ಷಿಕ ಕ್ರೀಡಾಕೂಟ

1 / 7

ಬಂಟ್ವಾಳ: ಸೌತ್ ಕೆನರಾ ಫೊಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ. ಉಡುಪಿ ಜಿಲ್ಲೆಯ ವಾರ್ಷಿಕ ಕ್ರೀಡಾಕೂಟ ಬಂಟ್ವಾಳ ಎಸ್.ವಿ.ಎಸ್. ದೇವಳ ಶಾಲೆಯ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಿತು. ಅಸೋಸಿಯೇಶನ್ ನ ಬಂಟ್ವಾಳ ವಲಯ ಆಶ್ರಯದಲ್ಲಿ ನಡೆದ ಕ್ರೀಡಾಕೂಟವನ್ನು ಎಸ್.ವಿ.ಎಸ್.ದೇಗುಲ ವಿದ್ಯಾಸಂಸ್ಥೆಗಳ ಸಂಚಾಲಕ ಪಿ.ಪ್ರವೀಣ್ ಕಿಣಿ ಉದ್ಘಾಟಿಸಿ ಮಾತನಾಡಿ, ಛಾಯಾಚಿತ್ರಗಳನ್ನು ತೆಗೆಯುವ ಮೂಲಕ ಬದುಕಿನ ಸುಂದರ ಕ್ಷಣಗಳನ್ನು ಕಟ್ಟಿಕೊಡುವ ಕೆಲಸ ಮಾಡುವ ಫೊಟೋಗ್ರಾಫರ್ಸ್ ಗಳು ಒಟ್ಟಾಗಿ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ತೊಡಗಿಸಿಕೊಂಡಿರುವುದರಿಂದ ಮನಸ್ಸು ಹಾಗೂ ದೇಹಕ್ಕೆ ಹೊಸ ಚೈತನ್ಯವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದರು.ಸಭಾಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷ ಶ್ರೀಧರ್ ಎನ್. ಶೆಟ್ಟಿಗಾರ್ ವಹಿಸಿ ಶುಭ ಹಾರೈಸಿದರು. ಪ್ರಧಾನ ಕಾರ್ಯದರ್ಶಿ ಹರೀಶ್ ಅಡ್ಯಾರ್, ಕೋಶಾಧಿಕಾರಿ ಆನಂದ ಎನ್, ಎಸ್.ಕೆ.ಪಿ.ಎ.ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ವಾಸುದೇವ ರಾವ್, ಬಂಟ್ವಾಳ ವಲಯ ಅಧ್ಯಕ್ಷ ವಿ.ಕುಮಾರಸ್ವಾಮಿ, ಕಾರ್ಯದರ್ಶಿ ವಿಕೇಶ್, ಜಿಲ್ಲಾ ಮಟ್ಟದ ವಿವಿಧ ಪದಾಧಿಕಾರಿಗಳಾದ ದೇವರಾಜ ಶೆಟ್ಟಿ, ನಾಗರಾಜ ರಾಯಪ್ಪನವರ,  ಪ್ರಸಾದ್ ಐಸಿರ, ತನುಂಜಯ್ ರಾವ್, ಪ್ರಕಾಶ್ ಬ್ರಹ್ಮಾವರ್, ಉದಯ ಮುಂಡ್ಕೂರ್ ಉಪಸ್ಥಿತರಿದ್ದರು. ಎಸೋಸಿಯೇಶನ್ ನ ಪ್ರಮುಖರಾದ ದಯಾನಂದ ಬಂಟ್ವಾಳ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಹರೀಶ್ ಅಡ್ಯಾರ್ ವಂದಿಸಿದರು. ಬಬಿತಾ ಲತೀಶ್ ಕಾರ್ಯಕ್ರಮ ನಿರೂಪಿಸಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts