ಪುಂಜಾಲಕಟ್ಟೆ

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್: 18ರಂದು ಸಾಮೂಹಿಕ ವಿವಾಹ ನಿಶ್ಚಿತಾರ್ಥ

ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 37ನೇ ವರ್ಷಾಚರಣೆ ಪ್ರಯುಕ್ತ  ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಎ.೨೫ರಂದು ನಡೆಯಲಿರುವ 13ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ಪ್ರಯುಕ್ತ ವಧು-ವರರ ನಿಶ್ಚಿತಾರ್ಥ ಕಾರ್ಯಕ್ರಮ ಏ.18ರಂದು ಪುಂಜಾಲಕಟ್ಟೆ ಪಿಲಾತಬೆಟ್ಟು ವ್ಯ.ಸೇ.ಸಂಘದ ಸುವಿಧಾ ಸಭಾಂಗಣದಲ್ಲಿ ಜರಗಲಿದೆ.

ಈ ಬಾರಿ ಒಟ್ಟು 16 ಜೋಡಿಗಳಿಗೆ ವಿವಾಹ ನಡೆಯಲಿದ್ದು,  ತುಳುನಾಡಿನ ಸಂಪ್ರದಾಯ ಪ್ರಕಾರ ನಿಶ್ಚಿತಾರ್ಥ ನಡೆಯಲಿದೆ. ಈ ಸಂದರ್ಭದಲ್ಲಿ ಭಾವೀ ವಧು-ವರರಿಗೆ ಮಂಗಳವಸ್ತ್ರವನ್ನು ವಿತರಿಸಲಾಗುವುದು.ಬೆಳ್ತಂಗಡಿ ಬಿಜೆಪಿ ಅಧ್ಯಕ್ಷ ಜಯಂತ ಕೋಟ್ಯಾನ್ ಅವರು ವಿತರಣ ಕಾರ್ಯಕ್ರಮದ  ಅಧ್ಯಕ್ಷತೆ ವಹಿಸುವರು.

ರಾಜ್ಯ ನಗರ ನೀರು ಸರಬರಾಜು ಒಳಚರಂಡಿ  ಮಂಡಳಿ ನಿರ್ದೇಶಕಿ ಸುಲೋಚನಾ ಜಿ.ಕೆ.ಭಟ್, ಶಿಶು ಅಭಿವೃದ್ಧಿ ಅಧಿಕಾರಿ ಗಾಯತ್ರಿ ಕಂಬಳಿ, ತುಳು ಸಾಹಿತ್ಯ ಅಕಾಡೆಮಿ ಸದಸ್ಯೆ ಮಲ್ಲಿಕಾ ಶೆಟ್ಟಿ,ಇರ್ವತ್ತೂರು ಗ್ರಾ.ಪಂ.ಅಧ್ಯಕ್ಷ ಎಂ.ಪಿ. ಶೇಖರ್, ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಮೊದಲಾದವರು ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ಕ್ಲಬ್ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಮತ್ತು ಅಧ್ಯಕ್ಷ ಪ್ರಶಾಂತ ಪುಂಜಾಲಕಟ್ಟೆ ಅವರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ