ಬಂಟ್ವಾಳ: ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 130 ನೇ ಜನ್ಮದಿನಾಚರಣೆಯ ಪ್ರಯುಕ್ತ ಬಂಟ್ವಾಳ ಮೆಸ್ಕಾಂ ಉಪವಿಭಾಗದ ಅಧಿಕಾರಿಗಳು ಹಾಗೂ ನೌಕಕರರ ಆಶ್ರಯದಲ್ಲಿ ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಹಾಗೂ ಕೆಎಂಸಿ ಆಸ್ಪತ್ರೆ ಮಂಗಳೂರು ಸಹಯೋಗದೊಂದಿಗೆ ರಕ್ತದಾನ ಶಿಬಿರ ಕಚೇರಿಯಲ್ಲಿ ನಡೆಯಿತು. ಮೆಸ್ಕಾಂ ಬಂಟ್ವಾಳ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಎಂ. ಉದ್ಘಾಟಿಸಿದರು. ಮುಖ್ಯ ಅತಿಥಿ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ. ಕೃಷ್ಣ ಕುಮಾರ್ ಪೂಂಜ ಅವರ ಸೇವಾ ಕಾರ್ಯಗಳನ್ನು ಗುರುತಿಸಿ ಸನ್ಮಾನಿಸಲಾಯಿತು. ಬಂಟ್ವಾಳ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ಗಳಾದ ಪ್ರಶಾಂತ್ ಪೈ, ನಾರಾಯಣ ಭಟ್, ಬೆಳ್ತಂಗಡಿ ಉಪವಿಭಾಗದ ಎಇಇ ಶಿವಶಂಕರ್, ವಿಟ್ಲ ಉಪವಿಭಾಗದ ಎಇಇ ಪ್ರವೀಣ್ ಜೋಷಿ, ಮೆಸ್ಕಾಂ ಲೆಕ್ಕಾಧಿಕಾರಿ ಅನ್ನಪೂರ್ಣ, ಎಇಇ ಭವತಾರಿಣಿ, ಲೆಕ್ಕಾಧಿಕಾರಿ ಚಂದ್ರಶೇಖರ್, ಕರ್ನಾಟಕ ವಿದ್ಯುತ್ ಪ್ರಸರಣ ನಿಯಮಿತ ನೌಕರರ ಸಂಘದ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಶಂಕರ್ ಪ್ರಕಾಶ್ ಕೆ. , ಪ.ಜಾತಿ ಮತ್ತು ಪಂಗಡ ಕಲ್ಯಾಣ ಸಂಸ್ಥೆಯ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ದಿನೇಶ್ ಕೆ. ಮತ್ತಿತರರು ಉಪಸ್ಥಿತರಿದ್ದರು. ಕೆಎಂಸಿ ಬ್ಲಡ್ ಬ್ಯಾಂಕಿನ ಭವಾನಿ ಶಂಕರ್, ಸೇವಾಂಜಲಿ ಪ್ರತಿಷ್ಠಾನದ ಪದ್ಮನಾಭ ಕಿದೆಬೆಟ್ಟು, ದೇವದಾಸ್ ಶೆಟ್ಟಿ ಕೊಡ್ಮಾಣ್, ಎಂ.ಕೆ. ಖಾದರ್, ಪ್ರಶಾಂತ್ ಮೊದಲಾದವರು ಹಾಜರಿದ್ದರು. ಮೆಸ್ಕಾಂನ ಸಿದ್ದರಾಜು ಸ್ವಾಗತಿಸಿದರು. ಆನಂದ್ ಎಂ. ವಂದಿಸಿದರು. ಬಳಿಕ ಮೆಸ್ಕಾಂ ಸಿಬ್ಬಂದಿಗಳು ರಕ್ತದಾನ ಮಾಡಿ 76 ಯುನಿಟ್ ರಕ್ತ ಸಂಗ್ರಹವಾಯಿತು.