ಬಂಟ್ವಾಳ: ಪರಿಶಿಷ್ಟ ಜಾತಿ ವಿರುದ್ಧ ಟಿಎಂಸಿ ನಾಯಕಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಎಸ್ಸಿ ಮೋರ್ಚಾ ವತಿಯಿಂದ ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ನಿಯೋಗ, ಮನವಿ ಸಲ್ಲಿಸಿ, ಟಿಎಂಸಿ ನಾಯಕಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.
ಬಿಜೆಪಿ ಎಸ್.ಸಿ.ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಹಾಗೂ ಮಂಗಳೂರು, ಉಡುಪಿ, ಹಾಸನ ಸಹಪ್ರಭಾರಿಗಳಾದ ದಿನೇಶ್ ಅಮ್ಟೂರು ಉಪಸ್ಥಿತಿಯಲ್ಲಿ ಮನವಿ ಸಲ್ಲಿಸಲಾಯಿತು. ದಕ್ಷಿಣ ಕನ್ನಡ ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ವಿನಯನೇತ್ರ ದಡ್ಡಲಕಾಡು ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಮನೋಜ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಎಸ್ಸಿ ಮೋರ್ಚಾದ ಪ್ರಭಾರಿಗಳಾದ ಮಂಗಳ ಆಚಾರ್ಯ ಹಾಗೂ ಎಸ್ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಅಣ್ಣಿ ಏಳ್ತಿಮಾರ್, ಭೋಜರಾಜ ಕೋಟ್ಯಾನ್, ಪ್ರಕಾಶ್ ಸಿಂಪೋನಿ, ಗಣೇಶ್ ಸೂಟರ್ ಪೇಟೆ ಹಾಗೂ ಪ್ರಮುಖರು ಉಪಸ್ಥಿತರಿದ್ದರು. ಜಿಲ್ಲಾಧಿಕಾರಿ ಅನುಪಸ್ಥಿತಿಯಲ್ಲಿ ಅಧಿಕಾರಿ ಶಿವಕುಮಾರ್ ಮನವಿ ಸ್ವೀಕರಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…