ಜಿಲ್ಲಾ ಸುದ್ದಿ

ಕೋವಿಡ್ ನಿಯಮ : ಸರ್ಕಾರದ ಆದೇಶ ಕಟ್ಟುನಿಟ್ಟಿನ ಪಾಲನೆ – ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಜಿಲ್ಲಾಡಳಿತವು ಸರ್ಕಾರದ ಆದೇಶದಲ್ಲಿ ಸೂಚಿಸಿರುವಂತೆ ಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪ್ರಸ್ತುತ ಕೋವಿಡ್ 19 ಸೋಂಕು ಹರಡುವಿಕೆ ಉಲ್ಬಣಗೊಂಡಿದ್ದು, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವೆಂದು ಮನಗಂಡು ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ (34)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿರುತ್ತಾರೆ.

ಆದೇಶ ಪಾಲನೆಯಲ್ಲಿ ಲೋಪವೆಸಗುವಂತವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಸೆಕ್ಷನ್ 51 ರಿಂದ 60 ಹಾಗೂ ಭಾರತೀಯ ದಂಡ ಸಂಹಿತೆ ಹಾಗೂ ಅನ್ವಯವಾಗಬಹುದಾದ ಇತರ ಕಾನೂನು ಉಪಬಂಧಗಳ ಅನುಸಾರ ಕ್ರಮ ಕೈಗೊಳ್ಳಲಾಗುವುದು.

ಜಿಲ್ಲೆಯಾದ್ಯಂತ ಸಾರ್ವಜನಿಕ ಸಮಾರಂಭ, ಆಚರಣೆಗಳು, ಮನೋರಂಜನೆ ಕಾರ್ಯಕ್ರಮಗಳಿಗೆ ಜನರ ಒಗ್ಗೂಡುವಿಕೆಗೆ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಲಾಗಿದೆ: ಮದುವೆ ಸಮಾರಂಭಗಳು – ತೆರೆದ ಪ್ರದೇಶಗಳಲ್ಲಿ 200 ಜನರು ಹಾಗೂ ಕಲ್ಯಾಣ ಮಂಟಪ, ಸಭಾಂಗಣ, ಹಾಲ್‍ಗಳು ಇತ್ಯಾದಿ ಮುಚ್ಚಿದ ಸ್ಥಳಗಳಲ್ಲಿ 100 ಜನರು ಪಾಲ್ಗೊಳ್ಳಬಹುದು. ಜನ್ಮ ದಿನ ಹಾಗೂ ಇತರೆ ಆಚರಣೆಗಳು ತೆರೆದ ಪ್ರದೇಶಗಳಲ್ಲಿ 50 ಜನರು ಹಾಗೂ ಸಭಾಂಗಣಗಳು, ಹಾಲ್‍ಗಳು, ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 25 ಜನರು, ನಿಧನ ಅಥವಾ ಶವಸಂಸ್ಕಾರ ತೆರೆದ ಪ್ರದೇಶಗಳಲ್ಲಿ 50 ಜನರು ಹಾಗೂ ಸಭಾಂಗಣಗಳು, ಹಾಲ್‍ಗಳು, ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 25 ಜನರು, ಅಂತ್ಯ ಕ್ರಿಯೆಗೆ 25 ಜನರು ಹಾಗೂ ಇತರೆ ಸಮಾರಂಭಗಳಿಗೆ ಹಾಲ್‍ನ ವಿಸ್ತೀರ್ಣಕ್ಕೆ ಅನುಗುಣವಾಗಿ 25 ಜನರು ಮತ್ತು ರಾಜಕೀಯ ಆಚರಣೆ ಹಾಗೂ ಸಮಾರಂಭಗಳಿಗೆ ತೆರೆದ ಪ್ರದೇಶಗಳಲ್ಲಿ 200 ಜನರು ಪಾಲ್ಗೊಳ್ಳಬಹುದು ಹಾಗೂ ಧಾರ್ಮಿಕ ಆಚರಣೆ ಹಾಗೂ ಸಮಾರಂಭಗಳನ್ನು ನಿಷೇಧಿಸಲಾಗಿದೆ.
ಜನರು ಕಡ್ಡಾಯವಾಗಿ ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸಂಬಂಧಪಟ್ಟ ಇಲಾಖೆಗಳು ಹೊರಡಿಸಿರುವ ಪ್ರಮಾಣಿತ ಕಾರ್ಯ ವಿಧಾನವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಭಾಂಗಣ, ಕಲ್ಯಾಣ ಮಂಟಪ, ಸಿನಿಮಾ ಮಂದಿರ, ಹಾಲ್‍ಗಳು ಮತ್ತು ಆಚರಣೆಗಾಗಿ ಜನಸೇರುವ ಇತರೆ ಪ್ರದೇಶಗಳ ಉಸ್ತುವಾರಿ ಹೊಂದಿರುವವರು ಕಡ್ಡಾಯವಾಗಿ ಸ್ಯಾನಿಟೈಸೇಷನ್ ಕ್ರಮಗಳನ್ನು ಅನುಸರಿಸಬೇಕು.
ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದೆ. ಆದೇಶ ಪಾಲನೆಯಲ್ಲಿ ಲೋಪವೆಸಗುವಂತವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ 51 ರಿಂದ 60 ಹಾಗೂ ಭಾರತೀಯ ದಂಡ ಸಂಹಿತೆ ಹಾಗೂ ಅನ್ವಯವಾಗಬಹುದಾದ ಇತರ ಕಾನೂನು ಉಪಬಂಧಗಳ ಅನುಸಾರ ಕ್ರಮ ಕೈಗೊಳ್ಳಲಾಗುವುದು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ