ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜ್ಗಳ ಸಹಯೋಗದೊಂದಿಗೆ ಆಯೋಜಿಸಲಾಗುವುದು. ಎಪ್ರಿಲ್ 20 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿ¯, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಮತ್ತು ಎಪ್ರಿಲ್ 21 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಆರೋಗ್ಯ ಕೇಂದ್ರಗಳಲ್ಲಿ ಶಿಬಿರ ನಡೆಯಲಿದೆ. ಎಂಡೋಸಲ್ಫಾನ್ ಸಂತ್ರಸ್ತರು ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.