ಸಾರ್ವಜನಿಕ ಸಮಾರಂಭ ಆಚರಣೆಗಳು, ಮನರಂಜನೆ ಕಾರ್ಯಕ್ರಮಗಳಿಗೆ ಪಾಸ್ ಕಡ್ಡಾಯ: ಡಿಸಿ

ಡಾ. ಕೆ.ವಿ.ರಾಜೇಂದ್ರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 (ಕೊರೊನಾ ವೈರಾಣು ಕಾಯಿಲೆ-2019) ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತವುಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪ್ರಸ್ತುತ ಕೋವಿಡ್-19 ಸೋಂಕು ಹರಡುವಿಕೆ ಉಲ್ಬಣಗೊಂಡಿದ್ದು, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವೆಂದು ಮನಗಂಡು ಸಾರ್ವಜನಿಕ ಸಮಾರಂಭ ಆಚರಣೆಗಳು, ಕಾರ್ಯಕ್ರಗಳಿಗೆ ಜನರ ಒಗ್ಗೂಡುವಿಕೆಗೆ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ರಾಜೇಂದ್ರ ಕೆ.ವಿ ನಿರ್ದೇಶಿಸಿದ್ದಾರೆ.
 ಮದುವೆ ಸಮಾರಂಭಗಳು – ತೆರೆದ ಪ್ರದೇಶಗಳಲ್ಲಿ 200 ಜನರು ಹಾಗೂ ಕಲ್ಯಾಣ ಮಂಟಪ, ಸಭಾಂಗಣ, ಹಾಲ್‍ಗಳು ಇತ್ಯಾದಿ ಮುಚ್ಚಿದ ಸ್ಥಳಗಳಲ್ಲಿ 100 ಜನರು ಪಾಲ್ಗೊಳ್ಳಬಹುದು. ಜನ್ಮ ದಿನ ಹಾಗೂ ಇತರೆ ಆಚರಣೆಗಳು ತೆರೆದ ಪ್ರದೇಶಗಳಲ್ಲಿ 50 ಜನರು ಹಾಗೂ ಸಭಾಂಗಣಗಳು, ಹಾಲ್‍ಗಳು, ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 25 ಜನರು, ನಿಧನ ಅಥವಾ ಶವಸಂಸ್ಕಾರ ತೆರೆದ ಪ್ರದೇಶಗಳಲ್ಲಿ 50 ಜನರು ಹಾಗೂ ಸಭಾಂಗಣಗಳು, ಹಾಲ್‍ಗಳು, ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 25 ಜನರು, ಅಂತ್ಯ ಕ್ರಿಯೆಗೆ 25 ಜನರು ಹಾಗೂ ಇತರೆ ಸಮಾರಂಭಗಳಿಗೆ ಹಾಲ್‍ನ ವಿಸ್ತೀರ್ಣಕ್ಕೆ ಅನುಗುಣವಾಗಿ 25 ಜನರು ಮತ್ತು ರಾಜಕೀಯ ಆಚರಣೆ ಹಾಗೂ ಸಮಾರಂಭಗಳಿಗೆ ತೆರೆದ ಪ್ರದೇಶಗಳಲ್ಲಿ 200 ಜನರು ಪಾಲ್ಗೊಳ್ಳಬಹುದು ಹಾಗೂ ಧಾರ್ಮಿಕ ಆಚರಣೆ ಹಾಗೂ ಸಮಾರಂಭಗಳನ್ನು ನಿಷೇಧಿಸಲಾಗಿದೆ. ಎಪ್ರಿಲ್ 17 ರಂದು ಮಾನ್ಯ ಕಂದಾಯ ಸಚಿವರು, ಮಾನ್ಯ ಗ್ರಹ ಸಚಿವರು, ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ನಡೆಸಿದ ವಿಡಿಯೋ ಸಂವಾದದಲ್ಲಿ ಮೇಲಿನ ಆಚರಣೆಗಳಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಬಹುದಾದ ಜನರ ಸಂಖ್ಯೆ (ಗರಿಷ್ಠ ಮಿತಿ)ಗೆ ಅನುಗುಣವಾಗಿ ಪಾಸ್‍ಗಳನ್ನು ವಿತರಿಸುವಂತೆ ನಿರ್ದೇಶಿಸಲಾಗಿದ್ದು, ಅದರಂತೆ ಜಿಲ್ಲೆಯಲ್ಲಿ ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಪಾಲಿಕೆಯ ಆಯುಕ್ತರು,  ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಮುಖ್ಯಾಧಿಕಾರಿಗಳು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸಾರ್ವಜನಿಕ ಸಮಾರಂಭ ಆಚರಣೆಗಳು, ಮನರಂಜನೆ ಕಾರ್ಯಕ್ರಮಗಳಿಗೆ ಜನರ ಒಗ್ಗೂಡುವಿಕೆಗೆ ಪಾಸ್‍ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲು ನಿರ್ದೇಶಿಸಲಾಗಿದೆ.
ಪಾಸ್‍ಗಳನ್ನು ವಿತರಿಸಲು ನಿರ್ದೇಶಿಸಿರುವ ಅಧಿಕಾರಿಗಳು ಆಚರಣೆಗಳಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಬಹುದಾದ ಜನರ ಸಂಖ್ಯೆ(ಗರಿಷ್ಠ ಮಿತಿ)ಗೆ ಅನುಗುಣವಾಗಿ ಅಥವಾ ಸರ್ಕಾರವು ಕಾಲಕಾಲಕ್ಕೆ ಹೊರಡಿಸುವ ಮಾರ್ಗಸೂಚಿಗಳನ್ವಯ, ಆಹ್ವಾನಿತರ ವಿವರಗಳನ್ನು ಪಡೆದು ಪಾಸ್ ಗಳನ್ನು ವಿತರಿಸಿ ಕೋವಿಡ್ ಸಮುಚಿತ ವರ್ತನೆಗೆ ಬದ್ಧರಾಗಿ ಕಾರ್ಯಕ್ರಮ ನಡೆಸಲು ಅನುಮತಿ ನೀಡಬೇಕು.
 ತಮ್ಮ ವ್ಯಾಪ್ತಿಯಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಕೋವಿಡ್ ಸಮುಚಿತ ವರ್ತನೆಯ ಪಾಲನೆಯಾಗುತ್ತಿರುವುದನ್ನು ಖಾತ್ರಿಪಡಿಸಿಕೊಳ್ಳುವುದು ಹಾಗೂ ತಪ್ಪಿದ್ದಲ್ಲಿ ಕಾರ್ಯಕ್ರಮ ಆಯೋಜಕರು, ಆವರಣ ಮಾಲಕರ ವಿರುದ್ಧ ಜಿಲ್ಲಾಡಳಿತದ ಆದೇಶದನ್ವಯ ದಂಡ ವಿಧಿಸಬೇಕು. ಸಂಬಂಧಪಟ್ಟ ಸಭಾಂಗಣ, ಕಲ್ಯಾಣ ಮಂಟಪ, ಹಾಲ್‍ಗಳು ಮತ್ತು ಆಚರಣೆಯ ಸಂಘಟಕರ ಪರವಾನಿಗೆಯನ್ನು ರದ್ದುಪಡಿಸುವುದು ಹಾಗೂ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ-2020ರಡಿ, ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 51ರಿಂದ 60 ಹಾಗೂ ಭಾರತೀಯ ದಂಡಸಂಹಿತೆ ಹಾಗೂ ಅನ್ವಯವಾಗಬಹುದಾದ ಇತರ ಕಾನೂನು ಉಪಬಂಧಗಳ ಅನುಸಾರ ಕ್ರಮ ಕೈಗೊಳ್ಳುಬೇಕು. ಮೇಲಿನ ಆದೇಶವನ್ನು ಅನುಷ್ಠಾನಗೊಳಿಸುವಲ್ಲಿ ಯಾವುದೇ ಲೋಪದೋಷಗಳಗಾದಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು. ತಪ್ಪಿದ್ದಲ್ಲಿ ಆಯಾ ಅಧಿಕಾರಿಯವರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಸಂಬಂಧಪಟ್ಟ ತಹಶೀಲ್ದಾರರುಗಳು ತಾಲೂಕು ವ್ಯಾಪ್ತಿಯಲ್ಲಿ ಒಟ್ಟಾಗಿ ಮೇಲ್ವಿಚಾರಣೆಯನ್ನು ನಿರ್ವಹಿಸಲು ನಿರ್ದೇಶಿಸಲಾಗಿದೆ.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಾರ್ವಜನಿಕ ಸಮಾರಂಭ ಆಚರಣೆಗಳು, ಮನರಂಜನೆ ಕಾರ್ಯಕ್ರಮಗಳಿಗೆ ಪಾಸ್ ಕಡ್ಡಾಯ: ಡಿಸಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*