





ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬುಧವಾರ ತಾಲೂಕು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಕೊರೊನಾ ಕುರಿತು ಕೈಗೊಂಡ ಕ್ರಮಗಳ ಪರಿಶೀಲನೆ ನಡೆಸಿದರು. ಈ ಸಂದರ್ಭ ಕೋವಿಡ್ ಸೋಂಕಿತರು ಹಾಗೂ ಇತರ ರೋಗಿಗಳ ಚಿಕಿತ್ಸೆಯ ಕುರಿತು ಹಾಗೂ ಲಭ್ಯವಿರುವ ಸೌಲಭ್ಯಗಳ ಕುರಿತು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ, ಪುಷ್ಪಲತಾ ಅವರಿಂದ ಮಾಹಿತಿ ಪಡೆದರು. ಆಸ್ಪತ್ರೆಯ ವೈದ್ಯರುಗಳಾದ ಡಾ. ಸೌಮ್ಯಾ, ಡಾ. ವೇಣುಗೋಪಾಲ್, ಡಾ. ಕಿಶೋರ್‌ಕುಮಾರ್ ಮೊದಲಾದವರು ಸೌಕರ್ಯಗಳ ಕುರಿತು ವಿವರಿಸಿದರು. ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಬಂಟ್ವಾಳ ಯುವ ಮೋರ್ಚಾ ಅಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು, ಅಮ್ಮುಂಜೆ ಗ್ರಾ.ಪಂ.ಸದಸ್ಯ ಕಾರ್ತಿಕ್ ಬಳ್ಳಾಲ್ ಮೊದಲಾದವರು ಶಾಸಕರ ಜತೆಗಿದ್ದರು.
Be the first to comment on "ಕೋವಿಡ್ ಹಿನ್ನೆಲೆ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರಿಂದ ಬಂಟ್ವಾಳ ಸರ್ಕಾರಿ ಆಸ್ಪತ್ರೆ ವ್ಯವಸ್ಥೆ ಪರಿಶೀಲನೆ"