Uncategorized

ಪುಂಜಾಲಕಟ್ಟೆಯಲ್ಲಿ 16 ಜೋಡಿಗಳ ಸರಳ ಸಾಮೂಹಿಕ ವಿವಾಹ

ಕೋವಿಡ್ ನಿಯಮ ಪಾಲಿಸಿ ಕಲ್ಯಾಣ – ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 37ನೇ ಸಂಭ್ರಮಾಚರಣೆ ಪ್ರಯುಕ್ತ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಭಾನುವಾರ 13ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 16 ಜೋಡಿ  ವಧೂ-ವರರು ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.

ವಧೂವರರು ಸಾಮೂಹಿಕ ವಿವಾಹದ ರೂವಾರಿ ಕ್ಲಬ್‌ನ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಅವರ ಕಾಲಿಗೆರಗಿ ಆಶೀರ್ವಾದ ಪಡೆದರು. ಕಂಬಳದ ತೀರ್ಪುಗಾರ ರಾಜೀವ ಶೆಟ್ಟಿ ಎಡ್ತೂರು ಅವರು ನೂತನ ವಧು-ವರರಿಗೆ ಶುಭ ಹಾರೈಸಿದರು. ವಾರಾಂತ್ಯ ಕರ್ಫ್ಯೂ ದಿನ ನಿಯಮಗಳನ್ನು ಪಾಲಿಸಿ ಮದುವೆ ಕಾರ್ಯಕ್ರಮಕ್ಕೆ ಅವಕಾಶ ಇದೆ. ಅದರಂತೆ ಸ್ಥಳೀಯಾಡಳಿತದ ಅನುಮತಿ ಪಡೆದು ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಸಲಾಗಿದೆ. ಪ್ರತಿ ಜೋಡಿಯ ಇಬ್ಬರು ಮಾತ್ರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ. 16 ಜೋಡಿಗಳನ್ನು ಎರಡು ವಿಭಾಗ ಮಾಡಿ 8 ಜೋಡಿಗಳ ವಿವಾಹ ನೆರವೇರಿಸಿ ಅವರ ಸಂಬಂಧಿಕರೆನ್ನೆಲ್ಲಾ ಮನೆಗೆ ಕಳುಹಿಸಿದ ಬಳಿಕ ಇನ್ನೊಂದು ವಿಭಾಗದ 8 ಜೋಡಿಯ ವಿವಾಹ ನಡೆಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಜೋಡಿಗಳಿಗೆ ಹಾಗೂ ಅವರ ಸಂಬಂಧಿಕರಿಗೆ ಮಾಸ್ಕ್ ಧರಿಸುವಂತೆ ಹಾಗೂ ಸಾಮಾಜಿಕ ಅಂತರ ಸಹಿತ ಸರಕಾರದ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ಮೊದಲೇ ಸೂಚನೆ ನೀಡಲಾಗಿತ್ತು. ಮಾರ್ಗಸೂಚಿ ಉಲ್ಲಂಘಿಸಿಲ್ಲ: ಕಾರ್ಯಕ್ರಮದಲ್ಲಿ ಸರಕಾರದ ಯಾವುದೇ ಮಾರ್ಗಸೂಚಿಯನ್ನು ಎಲ್ಲೂ ಉಲ್ಲಂಘಿಸಿಲ್ಲ‌. ಈ ಬಗ್ಗೆ ಅಪಪ್ರಚಾರ ನಡೆಸುವುದು ಸರಿಯಲ್ಲ ಎಂದು ಈ ಸಂದರ್ಭ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ತಿಳಿಸಿದ್ದಾರೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ