ಬಂಟ್ವಾಳ: ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಶುಕ್ರವಾರ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಕೊರೊನಾ ಲಸಿಕೆಯನ್ನು ಪಡೆದರು. 45 ವರ್ಷ ಮೇಲ್ಪಟ್ಟವರು ಎಲ್ಲರೂ ವ್ಯಾಕ್ಸಿನ್ ಪಡೆಯಬೇಕು. ಒಂದನೇ ವಾಕ್ಸಿನ್ ಪಡೆದವರು ಎರಡನೇ ವ್ಯಾಕ್ಸಿನ್ ಕೂಡಲೇ ಪಡೆಯಬೇಕು. 18 ವರ್ಷ ಮೇಲ್ಪಟ್ಟವರು ವ್ಯಾಕ್ಸಿನ್ ಗಾಗಿ ನೋಂದಣಿ ಮಾಡಬೇಕು. ಮೊದಲು ನೋಂದಣಿ ಮಾಡಿದವರಿಗೆ ಅದ್ಯತೆಯ ಮೇರೆಗೆ ವ್ಯಾಕ್ಸಿನ್ ಕೊಡಲಾಗುವುದು ಎಂದು ಅವರು ಹೇಳಿದರು. ಕೊರೋನ ವೈರಸ್ ನಿಯಂತ್ರಣಕ್ಕೆ ಜನರು ಆಡಳಿತದೊಂದಿಗೆ ಸಹಕಾರ ನೀಡಬೇಕು. ಲಸಿಕೆ ಪಡೆಯುವುದು, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಮಾಡಬೇಕು. ಕರ್ಫ್ಯೂ ಸಂದರ್ಭದಲ್ಲಿ ಅನಗತ್ಯವಾಗಿ ಮನೆಯಿಂದ ಹೊರ ಬರಬಾರದು. ಯಾವುದಾದರೂ ತುರ್ತು ಸಂದರ್ಭದಲ್ಲಿ ಸಂಬಂಧಿಸಿದವರಿಗೆ ಕರೆ ಮಾಡಿ ಸೇವೆ ಪಡೆಯಿರಿ ಎಂದು ಅವರು ಸಲಹೆ ನೀಡಿದರು.