STAY HOME STAY SAFE – ಜಿಲ್ಲೆಯಲ್ಲೀಗ 6486 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೊರೊನಾ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಿಸುತ್ತಿದ್ದು, ಶುಕ್ರವಾರ (ಏ.30) ಒಂದೇ ದಿನ 1205 ಮಂದಿಗೆ ಸೋಂಕು ದೃಢಪಟ್ಟಿದೆ. ಜಿಲ್ಲಾಧಿಕಾರಿ ಕಚೇರಿ ಹೊರಡಿಸಿದ ಸಾರ್ವಜನಿಕ ಪ್ರಕಟಣೆಯಂತೆ ಇಂದು 380 ಮಂದಿ ಗುಣಮುಖರಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ. ಅಂಕಿ ಅಂಶಗಳ ಪ್ರಕಾರ, ಇಡೀ ಜಿಲ್ಲೆಯಲ್ಲಿ 6486 ಮಂದಿ ಸೋಂಕಿತರು ಇದ್ದು, ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ವರ್ಷದಿಂದ ಇದುವರೆಗೆ ದ.ಕ.ಜಿಲ್ಲೆಯಲ್ಲಿ 757 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ (ಅಥವಾ ಮೃತಪಟ್ಟವರಲ್ಲಿ ಕೊರೊನಾ ಪಾಸಿಟಿವ್ ಬಂದಿದೆ). ಇವರಲ್ಲಿ 37866 ಗುಣಮುಖರಾಗಿದ್ದಾರೆ. ಗಮನಾರ್ಹ ಅಂಶವೆಂದರೆ, ಪರೀಕ್ಷೆ ನಡೆಸಿದ 7,39,170ರಲ್ಲಿ 6,94,061 ಮಂದಿಗೆ ನೆಗೆಟಿವ್ ಬಂದಿದೆ (ಅಂದರೆ ಕೊರೊನಾ ಸೋಂಕು ಕಂಡುಬಂದಿಲ್ಲ). ಇದುವರೆಗೆ 45,109 ಮಂದಿಗೆ ಸೋಂಕು ತಗಲಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "CORONA ALERT: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1205 ಮಂದಿಗೆ ಸೋಂಕು ದೃಢ"
Be the first to comment on "CORONA ALERT: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1205 ಮಂದಿಗೆ ಸೋಂಕು ದೃಢ"