ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ರಕ್ತದಾನ ಶಿಬಿರ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ವತಿಯಿಂದ ಶ್ರೀರಾಮ ಪದವಿ ಕಾಲೇಜಿನ ರೆಡ್ ಕ್ರಾಸ್ ಘಟಕ ಹಾಗೂ ಕೆ.ಎಸ್. ಹೆಗ್ಡೆ ವೈದ್ಯಕೀಯ ಕಾಲೇಜು ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ ಸರ್ಕಾರದ ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಶುಕ್ರವಾರ ನಡೆಯಿತು.  ಸುಮಾರು 130ಕ್ಕೂ ಅಧಿಕ ಮಂದಿ ರಕ್ತದಾನ ಮಾಡಿದರು.

ಬೆಳಗ್ಗೆ 9.30ಕ್ಕೆ ಆರಂಭಗೊಂಡ ಶಿಬಿರ ಮಧ್ಯಾಹ್ನ 1 ಗಂಟೆವರೆಗೆ ನಡೆಯಿತು. ಶಿಬಿರಕ್ಕೆ ಅಗತ್ಯವಿದ್ದ ಸಂಖ್ಯೆಗಿಂತ ಅಧಿಕ ಮಂದಿ ಆಗಮಿಸಿದ ಹಿನ್ನೆಲೆಯಲ್ಲಿ ಉಳಿದ ಶಿಬಿರಾರ್ಥಿಗಳನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು.  ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಉದ್ಘಾಟಿಸಿ ರಕ್ತದಾನ ಶಿಬಿರದ ಅಗತ್ಯವನ್ನು ಹೇಳಿ, ಮೇ.1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೆ ಲಸಿಕೆ ಹಾಕಿಸಿಕೊಳ್ಳಬೇಕಾಗಿರುವುದರಿಂದ ನಂತರದ ಎರಡರಿಂದ ಮೂರು ತಿಂಗಳು ರಕ್ತದಾನಕ್ಕೆ ಅವಕಾಶವಿರುವುದಿಲ್ಲ, ಈ ಹಿನ್ನಲೆಯಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿರುವುದಾಗಿ ತಿಳಿಸಿದರು.

ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ಆಡಳಿತ ಮಂಡಳಿಯ ಸದಸ್ಯೆ ಲಕ್ಷ್ಮೀ ರಘುರಾಜ್, ಆಡಳಿತ ಮಂಡಳಿ,  ಅಧ್ಯಾಪಕ ವೃಂದ,  ವಿದ್ಯಾರ್ಥಿಗಳು, ಹಿರಿಯ ವಿದ್ಯಾರ್ಥಿಗಳು, ಕಲ್ಲಡ್ಕ ಪರಿಸರದ ವಿವಿಧ ಸಂಘಸಂಸ್ಥೆಗಳ ಸದಸ್ಯರು ಉಪಸ್ಥಿತರಿದ್ದು, ಪ್ರಕ್ರಿಯೆಯಲ್ಲಿ ಪಾಲ್ಗೊಂಡರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ರಕ್ತದಾನ ಶಿಬಿರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*