ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರೊಂದು ರಸ್ತೆ ಬದಿ ಮಗುಚಿ ಬಿದ್ದ ಘಟನೆ ಶುಕ್ರವಾರದಂದು ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ತುಂಬಿಕೊಂಡು ಹೊರಟಿದ್ದ ಟ್ಯಾಂಕರ್ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಗ್ಯಾಸ್ ಸೋರಿಕೆ ಆಗದೆ ಇದ್ದುದರಿಂದ ಅನಾಹುತ ತಪ್ಪಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನೆಲ್ಯಾಡಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ"