


ಬಂಟ್ವಾಳ: ಬಂಟ್ವಾಳ ಪುರಸಭೆಯ ಮಾಜಿ ಉಪಾಧ್ಯಕ್ಷ ವಿಠಲ ಬಂಗೇರ (74) ಅಲ್ಪಕಾಲದ ಅಸೌಖ್ಯದಿಂದ ಬಿ.ಸಿ.ರೋಡಿನ ಕೈಕುಂಜೆಯ ಸ್ವಗೃಹದಲ್ಲಿ ನಿಧನ ಹೊಂದಿದರು. ಪತ್ನಿ, ಪುತ್ರಿ ಹಾಗೂ ಇಬ್ಬರು ಪುತ್ರರನ್ನು ಅವರು ಹೊಂದಿದ್ದರು. ಕುಲಾಲ ಸಮಾಜದ ಹಿರಿಯ ನಾಯಕರಾಗಿದ್ದ ಅವರು ಕಮ್ಯೂನಿಸ್ಟ್ ಪಕ್ಷದ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಬಂಟ್ವಾಳ ಪುರಸಭೆಯಲ್ಲಿ ಎರಡು ಬಾರಿ ಉಪಾಧ್ಯಕ್ಷರಾಗಿ, ಭೂ ನ್ಯಾಯ ಮಂಡಳಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಅವರು ಹಿಂದೆ ವಿಟ್ಲ ವಿಧಾನಸಭಾ ಕ್ಷೇತ್ರದಿಂದ ಸಿಪಿಐ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
Be the first to comment on "ಬಂಟ್ವಾಳ ಪುರಸಭೆ ಮಾಜಿ ಉಪಾಧ್ಯಕ್ಷ ವಿಠಲ ಬಂಗೇರ ನಿಧನ"