ಬಂಟ್ವಾಳ: ಬರಿಮಾರು ಗ್ರಾಪಂ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಈ ಸಂದರ್ಭ ಮಾತನಾಡಿದ ಶಾಸಕರು, ಗ್ರಾಮಕ್ಕೆ ಹೊರ ಜಿಲ್ಲೆ, ರಾಜ್ಯದವರು ಬಂದರೆ ಎಚ್ಚರಿಕೆ ವಹಿಸಬೇಕು ಕೊರೊನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಿ, ಸದ್ಯಕ್ಕೆ ಗ್ರಾಮದಲ್ಲಿ ಒಂದೇ ಪ್ರಕರಣವಿದ್ದು, ಹೆಚ್ಚಾಗದಂತೆ ನೋಡಿಕೊಳ್ಳಿ ಎಂದು ಸೂಚಿಸಿದರು.
ಮುಂದಿನ ದಿನಗಳಲ್ಲಿ ಪಡಿತರ ಆಗಮಿಸಲಿದ್ದು, ಯಾವುದೇ ರೀತಿಯ ರಷ್ ಆಗದಂತೆ ವಿತರಣೆಗೆ ವ್ಯವಸ್ಥೆ ಮಾಡಬೇಕು ಎಂದು ತಹಶೀಲ್ದಾರ್ ರಶ್ಮಿ ಎಸ್.ಆರ್. ಹೇಳಿದರು. ಮನೆ ಭೇಟಿಯ ಸಂದರ್ಭದಲ್ಲಿ ಯಾವುದೇ ತೊಂದರೆ ಎದುರಾದರೂ ಸಂಬಂಧಪಟ್ಟವರಿಗೆ ಮಾಹಿತಿ ನೀಡುವಂತೆ ಆಶಾ ಕಾರ್ಯಕರ್ತರಿಗೆ ತಿಳಿಸಲಾಯಿತು. ಕೋವಿಡ್ ನಿಯಮ ಪಾಲನೆ ಮಾಡದೆ ಉಲ್ಲಂಘನೆ ಮಾಡುವವರ ಮೇಲೆ ಕ್ರಮಕೈಗೊಳ್ಳಲು ಟಾಸ್ಕ್ ಫೋರ್ಸ್ ಸಮಿತಿ ಗೆ ಸಂಪೂರ್ಣ ಅವಕಾಶ ವಿದ್ದು ಎಲ್ಲರೂ ನಿಯಮ ಪಾಲನೆ ಮಾಡುವಂತೆ ನೋಡಿಕೊಳ್ಳಲು ಇಒ ರಾಜಣ್ಣ ಹೇಳಿದರು. ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಜಿ.ಪಂ.ಸದಸ್ಯೆ ಕಮಲಾಕ್ಷಿ ಕೆ.ಪೂಜಾರಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್, ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ಬರಿಮಾರು ಗ್ರಾಮ ಪಂಚಾಯತ್ ಅದ್ಯಕ್ಷೆ ಶಶಿಕಲಾ , ಉಪಾಧ್ಯಕ್ಷ ಸದಾಶಿವ, ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಗ್ರಾಮಾಂತರ ಪೋಲೀಸ್ ಠಾಣೆಯ ಎಸ್.ಐ ಪ್ರಸನ್ನ, ಬರಿಮಾರು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಲಕ್ಷಣ್ ಎಚ್.ಕೆ. ಮೊದಲಾದವರು ಉಪಸ್ಥಿತರಿದ್ದರು.