ಬಂಟ್ವಾಳ

ಗ್ರಾಮಕ್ಕೆ ಹೊರಜಿಲ್ಲೆ, ರಾಜ್ಯದವರು ಬಂದರೆ ನಿಗಾ ವಹಿಸಿ: ಬರಿಮಾರು ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಸೂಚನೆ

ಬಂಟ್ವಾಳ: ಬರಿಮಾರು ಗ್ರಾಪಂ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಈ ಸಂದರ್ಭ ಮಾತನಾಡಿದ ಶಾಸಕರು, ಗ್ರಾಮಕ್ಕೆ ಹೊರ ಜಿಲ್ಲೆ, ರಾಜ್ಯದವರು ಬಂದರೆ ಎಚ್ಚರಿಕೆ ವಹಿಸಬೇಕು ಕೊರೊನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಿ, ಸದ್ಯಕ್ಕೆ ಗ್ರಾಮದಲ್ಲಿ ಒಂದೇ ಪ್ರಕರಣವಿದ್ದು, ಹೆಚ್ಚಾಗದಂತೆ ನೋಡಿಕೊಳ್ಳಿ ಎಂದು ಸೂಚಿಸಿದರು.

ಮುಂದಿನ ದಿನಗಳಲ್ಲಿ ಪಡಿತರ ಆಗಮಿಸಲಿದ್ದು, ಯಾವುದೇ ರೀತಿಯ ರಷ್ ಆಗದಂತೆ ವಿತರಣೆಗೆ ವ್ಯವಸ್ಥೆ ಮಾಡಬೇಕು ಎಂದು ತಹಶೀಲ್ದಾರ್ ರಶ್ಮಿ ಎಸ್.ಆರ್. ಹೇಳಿದರು. ಮನೆ ಭೇಟಿಯ ಸಂದರ್ಭದಲ್ಲಿ ಯಾವುದೇ ತೊಂದರೆ ಎದುರಾದರೂ ಸಂಬಂಧಪಟ್ಟವರಿಗೆ ಮಾಹಿತಿ ನೀಡುವಂತೆ ಆಶಾ ಕಾರ್ಯಕರ್ತರಿಗೆ ತಿಳಿಸಲಾಯಿತು.  ಕೋವಿಡ್ ನಿಯಮ ಪಾಲನೆ ಮಾಡದೆ ಉಲ್ಲ‌ಂಘನೆ ಮಾಡುವವರ ಮೇಲೆ ಕ್ರಮಕೈಗೊಳ್ಳಲು ಟಾಸ್ಕ್ ಫೋರ್ಸ್ ಸಮಿತಿ ಗೆ ಸಂಪೂರ್ಣ ಅವಕಾಶ ವಿದ್ದು ಎಲ್ಲರೂ ನಿಯಮ ಪಾಲನೆ ಮಾಡುವಂತೆ ನೋಡಿಕೊಳ್ಳಲು ಇಒ ರಾಜಣ್ಣ ಹೇಳಿದರು. ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಜಿ.ಪಂ.ಸದಸ್ಯೆ ಕಮಲಾಕ್ಷಿ ಕೆ.ಪೂಜಾರಿ,  ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್, ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ಬರಿಮಾರು ಗ್ರಾಮ ಪಂಚಾಯತ್ ಅದ್ಯಕ್ಷೆ ಶಶಿಕಲಾ , ಉಪಾಧ್ಯಕ್ಷ ಸದಾಶಿವ, ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಗ್ರಾಮಾಂತರ ಪೋಲೀಸ್ ಠಾಣೆಯ ಎಸ್.ಐ ಪ್ರಸನ್ನ, ಬರಿಮಾರು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಲಕ್ಷಣ್ ಎಚ್.ಕೆ. ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ