ಬಂಟ್ವಾಳ: ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಪಂ ವ್ಯಾಪ್ತಿಯಲ್ಲಿ 5 ಮಂದಿಗೆ ಕೊರೊನಾ ಸೋಂಕು ತಗಲಿದ್ದು, ಈ ಹಿನ್ನೆಲೆಯಲ್ಲಿ ಎಚ್ಚರ ವಹಿಸುವಂತೆ ಮಂಗಳವಾರ ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆಯಲ್ಲಿ ನಡೆದ ಟಾಸ್ಕ್ ಫೋರ್ಸ್ ಸಭೆಯಲ್ಲಿ ತೀರ್ಮಾನಿಸಲಾಯಿತು.ಕಡೇಶಿವಾಲಯದಲ್ಲಿ ಐದು ಪ್ರಕರಣಗಳು ಕಂಡುಬಂದಿದ್ದು, ವಾರಕ್ಕೊಂದು ಬಾರಿ ಸಭೆ ನಡೆಸಬೇಕು. ಪಂಚಾಯತ್ ಸದಸ್ಯರು, ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದರು. ಗ್ರಾಮದಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಹೊರಗಿನವರು ಬಾರದಂತೆ ಕ್ರಮ ಕೈಗೊಳ್ಳಿ ಎಂದು ಹೇಳಿದ ಶಾಸಕ, ಕರ್ತವ್ಯನಿರತ ಬೀಟ್ ಪೊಲೀಸ್ ಗೈರುಹಾಜರಾಗಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿ, ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ದಿನಕ್ಕೆ 100 ಮಂದಿಗೆ ರೇಷನ್ ವಿತರಿಸಿ, ಟೋಕನ್ ವ್ಯವಸ್ಥೆ ಅಳವಡಿಸಿ ಎಂದು ರೇಷನ್ ಅಂಗಡಿ ಮಾಲೀಕರಿಗೆ ಅವರು ಸೂಚಿಸಿದರು.ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಜಿ.ಪಂ.ಸದಸ್ಯೆ ಕಮಲಾಕ್ಷಿ ಕೆ.ಪೂಜಾರಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್, ಗ್ರಾ.ಪಂ.ಅಧ್ಯಕ್ಷ ಸುರೇಶ್ ಶೆಟ್ಟಿಗಾರ್, ಉಪಾಧ್ಯಕ್ಷೆ ಜಯ ಆರ್, ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ಕಡೇಶಿವಾಲಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೆನ್ನಪ್ಪ ನಾಯ್ಕ ಬಿ ಮೊದಲಾದವರು ಉಪಸ್ಥಿತರಿದ್ದರು.