ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಬುಧವಾರ ಗೃಹರಕ್ಷಕ ದಳದ ಕೋವಿಡ್ ಮಾರ್ಷಲ್ ಗಳಿಗೆ ಅಗತ್ಯವಿರುವ ಫೇಸ್ ಮಾಸ್ಕ್ ಮತ್ತು ಫೇಸ್ ಶೀಲ್ಡ್ ಗಳನ್ನು ಬುಧವಾರ ವಿತರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ. ಮುರಲೀಮೋಹನ ಚೂಂತಾರು ಬಂಟ್ವಾಳ ಘಟಕಕ್ಕೆ ಭೇಟಿ ನೀಡಿ, ಕೋವಿಡ್ ಮಾರ್ಷಲ್ ಕರ್ತವ್ಯ ನಿರ್ವಹಿಸುತ್ತಿರುವ ಬಂಟ್ವಾಳದ ಗೃಹರಕ್ಷಕರಿಗೆ ಕೋವಿಡ್ ವೈರಾಣುವಿನಿಂದ ರಕ್ಷಿಸುವ ಸಲುವಾಗಿ 3ಎಂ ಎನ್95 ಫೇಸ್ ಮಾಸ್ಕ್ ಮತ್ತು ಫೇಸ್ ಶೀಲ್ಡ್ ಗಳನ್ನು ವಿತರಿಸಿದರು. ಬಂಟ್ವಾಳ ಘಟಕಾಧಿಕಾರಿ ಐತಪ್ಪ, ಬಂಟ್ವಾಳ ಘಟಕದ ಗೃಹರಕ್ಷಕ, ರಕ್ಷಕಿಯರು ಈ ಸಂದರ್ಭ ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳದ ಗೃಹರಕ್ಷಕದಳ ಮಾರ್ಷಲ್ ಗಳಿಗೆ ಫೇಸ್ ಮಾಸ್ಕ್, ಫೇಸ್ ಶೀಲ್ಡ್ ವಿತರಣೆ"