ಬಂಟ್ವಾಳ

ಮಣಿನಾಲ್ಕೂರಿನಲ್ಲಿ ಕೊರೊನಾ ಟಾಸ್ಕ್ ಫೋರ್ಸ್ ಸಮಿತಿ ಸಭೆ

ವಗ್ಗದಲ್ಲಿ ಕೇರ್ ಸೆಂಟರ್, ಕೋವಿಡ್ ನಿಯಮ ಕಟ್ಟುನಿಟ್ಟಿನ ಪಾಲನೆಗೆ ಕ್ರಮ

ಬಂಟ್ವಾಳ:  ಬಂಟ್ವಾಳ ತಾಲೂಕಿನ ಮಣಿನಾಲ್ಕೂರಿನಲ್ಲಿ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಕೊರೊನಾ ಟಾಸ್ಕ್ ಫೋರ್ಸ್ ಸಮಿತಿ ಸಭೆ ಬುಧವಾರ ನಡೆಯಿತು.ಮಣಿನಾಲ್ಕೂರು ಗ್ರಾಮದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯವಿರುವವರಿಗೆ ಕೋವಿಡ್ ಕೇರ್ ಸೆಂಟರ್ ವಗ್ಗದಲ್ಲಿ ಲಭ್ಯವಿರುತ್ತದೆ ಎಂದು ಶಾಸಕರು ಈ ಸಂದರ್ಭ ಹೇಳಿದರು. ಮಣಿನಾಲ್ಕೂರು ಗ್ರಾ.ಪಂ.ಸದಸ್ಯ ಪುರುಷೋತ್ತಮ ಪೂಜಾರಿ ಅವರು, ಅಂಗಡಿ ಮುಂಗಟ್ಟುಗಳ ಮುಂದೆ ಅನಗತ್ಯ ಜನ ಸೇರದಂತೆ ಕಟ್ಟುನಿಟ್ಟಿನ ಸೂಚನೆ ನೀಡಲು ತಿಳಿಸಿದರು. ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸಲಹೆ ಸೂಚನೆಗಳನ್ನು ನೀಡಿದರು. ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು, ಬುಡಾ ಅಧ್ಯಕ್ಷ ದೇವದಾಸ್ ಶೆಟ್ಟಿ ಮಣಿನಾಲ್ಕೂರು ಗ್ರಾ.ಪಂ.ಅಧ್ಯಕ್ಷೆ ನಾಗವೇಣಿ, ಉಪಾಧ್ಯಕ್ಷೆ ಗೀತಾ ಅರಿಪ್ಪಾಡಿ, ಅಭಿವೃದ್ಧಿ ಅಧಿಕಾರಿ ವಸಂತಿ ಈ ಸಂದರ್ಭ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.