ಸರಪಾಡಿಯಲ್ಲಿ ನಡೆದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ




ಬಂಟ್ವಾಳ: ಬಂಟ್ವಾಳ ತಾಲೂಕಿನ ಸರಪಾಡಿಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಬುಧವಾರ ಗ್ರಾಪಂನಲ್ಲಿ ಪ್ರಗತಿಪರಿಶೀಲನೆ ನಡೆಸಿದರು.
ತಾಲೂಕಿನ ಟಾಸ್ಕ್ ಫೋರ್ಸ್ ಸಕ್ರಿಯವಾಗಬೇಕು, ವಾರಕ್ಕೊಮ್ಮೆ ಸಭೆ ನಡೆಸಬೇಕು, ಸರಪಾಡಿಯ 22 ಮನೆಗಳಲ್ಲಿ 37 ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಗಂಭೀರವಾಗಿ ಪರಿಗಣಿಸಬೇಕು. ಕಾರ್ಯಪಡೆ ತನಗಿರುವ ವ್ಯಾಪ್ತಿಯಲ್ಲಿ ಸಕ್ರಿಯವಾಗಿ ಕೆಲಸ ಮಾಡಿದರೆ, ಪ್ರಕರಣಗಳ ಸಂಖ್ಯೆ ಕಡಿಮೆ ಆಗುವ ಸಾಧ್ಯತೆ ಇದೆ ಎಂದು ಶಾಸಕರು ಈ ಸಂದರ್ಭ ಹೇಳಿದರು.
ಸರಪಾಡಿ ಗ್ರಾ.ಪಂ.ಸದಸ್ಯ ಎನ್.ಧನಂಜಯ ಶೆಟ್ಟಿ, ಬಾಲಕೃಷ್ಣ ಪೂಜಾರಿ ಸಭೆಯ ಗಮನಕ್ಕೆ ಹಲವು ವಿಷಯಗಳ ಕುರಿತು ವಿವರ ನೀಡಿದರು. ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸಲಹೆ ಸೂಚನೆಗಳನ್ನು ನೀಡಿದರು. ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು, ಬುಡಾ ಅಧ್ಯಕ್ಷ ದೇವದಾಸ್ ಶೆಟ್ಟಿ, ಸರಪಾಡಿ ಗ್ರಾ.ಪಂ.ಅಧ್ಯಕ್ಷ ಲೀಲಾವತಿ ಧರ್ಣಪ್ಪ, ಉಪಾಧ್ಯಕ್ಷೆ ನಳಿನಿ, ಅಭಿವೃದ್ಧಿ ಅಧಿಕಾರಿ ಸಿಲ್ವಿಯಾ ಫೆರ್ನಾಂಡೀಸ್ ಗ್ರಾಪಂ ಸದಸ್ಯರು, ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರು ಈ ಸಂದರ್ಭ ಉಪಸ್ಥಿತರಿದ್ದರು.
Be the first to comment on "ಕೊರೊನಾಮುಕ್ತ ಗ್ರಾಮ ಮಾಡಲು ಎಲ್ಲರ ಸಹಕಾರ ಅಗತ್ಯ"