ಬಂಟ್ವಾಳ

ಕೊರೊನಾಮುಕ್ತ ಗ್ರಾಮ ಮಾಡಲು ಎಲ್ಲರ ಸಹಕಾರ ಅಗತ್ಯ

ಸರಪಾಡಿಯಲ್ಲಿ ನಡೆದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ

ಬಂಟ್ವಾಳ: ಬಂಟ್ವಾಳ ತಾಲೂಕಿನ ಸರಪಾಡಿಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಬುಧವಾರ ಗ್ರಾಪಂನಲ್ಲಿ ಪ್ರಗತಿಪರಿಶೀಲನೆ ನಡೆಸಿದರು.

ತಾಲೂಕಿನ ಟಾಸ್ಕ್ ಫೋರ್ಸ್ ಸಕ್ರಿಯವಾಗಬೇಕು, ವಾರಕ್ಕೊಮ್ಮೆ ಸಭೆ ನಡೆಸಬೇಕು, ಸರಪಾಡಿಯ 22 ಮನೆಗಳಲ್ಲಿ 37 ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಗಂಭೀರವಾಗಿ ಪರಿಗಣಿಸಬೇಕು. ಕಾರ್ಯಪಡೆ ತನಗಿರುವ ವ್ಯಾಪ್ತಿಯಲ್ಲಿ ಸಕ್ರಿಯವಾಗಿ ಕೆಲಸ ಮಾಡಿದರೆ, ಪ್ರಕರಣಗಳ ಸಂಖ್ಯೆ ಕಡಿಮೆ ಆಗುವ ಸಾಧ್ಯತೆ ಇದೆ ಎಂದು ಶಾಸಕರು ಈ ಸಂದರ್ಭ ಹೇಳಿದರು.

ಜಾಹೀರಾತು

ಸರಪಾಡಿ ಗ್ರಾ.ಪಂ.ಸದಸ್ಯ ಎನ್.ಧನಂಜಯ ಶೆಟ್ಟಿ, ಬಾಲಕೃಷ್ಣ ಪೂಜಾರಿ ಸಭೆಯ ಗಮನಕ್ಕೆ ಹಲವು ವಿಷಯಗಳ ಕುರಿತು ವಿವರ ನೀಡಿದರು.  ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸಲಹೆ ಸೂಚನೆಗಳನ್ನು ನೀಡಿದರು. ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು, ಬುಡಾ ಅಧ್ಯಕ್ಷ ದೇವದಾಸ್ ಶೆಟ್ಟಿ, ಸರಪಾಡಿ ಗ್ರಾ.ಪಂ.ಅಧ್ಯಕ್ಷ ಲೀಲಾವತಿ ಧರ್ಣಪ್ಪ, ಉಪಾಧ್ಯಕ್ಷೆ ನಳಿನಿ, ಅಭಿವೃದ್ಧಿ ಅಧಿಕಾರಿ ಸಿಲ್ವಿಯಾ ಫೆರ್ನಾಂಡೀಸ್ ಗ್ರಾಪಂ ಸದಸ್ಯರು, ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರು ಈ ಸಂದರ್ಭ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.