ಬಂಟ್ವಾಳ

ಆದ್ಯತೆ ಮೇರೆಗೆ ಲಸಿಕೆ, ಕೋವಿಡ್ ಪ್ರಕರಣಗಳ ಹೆಚ್ಚಳ ಕುರಿತು ಕ್ರಮ: ಉಳಿ ಗ್ರಾಮದಲ್ಲಿ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಲಸಿಕೆ ಹಾಕಲು ಬಾಕಿ ಉಳಿದವರ ಪಟ್ಟಿ ಮಾಡಿ, ಕೊರೊನಾ ಸೋಂಕಿತರ ನಿಗಾಕ್ಕೆ ಇರುವ ಸೌಲಭ್ಯಗಳನ್ನು ಬಳಸಿಕೊಳ್ಳಿ, ಕ್ವಾರಂಟೈನ್ ನವರಿಗೆ ಅವಶ್ಯವಿದ್ದರೆ ಕೋವಿಡ್ ಕೇರ್ ಸೆಂಟರ್ ಬಳಸಿಕೊಳ್ಳಿ ಎಂದು ಉಳಿ ಗ್ರಾಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.

ಕೊರೊನಾ ಹಿನ್ನೆಲೆಯಲ್ಲಿ ಬುಧವಾರ ಉಳಿ ಗ್ರಾಮದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕು ದೃಢಪಟ್ಟವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಿ ಪರೀಕ್ಷೆಗೆ ಒಳಪಡಿಸಬೇಕು ಎಂದರು. ಆಯಾಯ ಗ್ರಾ.ಪಂ.ವ್ಯಾಪ್ತಿಗಳಲ್ಲಿ ಪಡಿತರ ವಿತರಣೆಯಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಎಚ್ಚರಿಕೆ ವಹಿಸಲು ತಹಶೀಲ್ದಾರ್ ರಶ್ಮಿ ಎಸ್.ಆರ್.ಸೂಚನೆ ನೀಡಿದರು. ವಾರಕ್ಕೊಂದು ಬಾರಿ ಟಾಸ್ಕ್ ಫೋರ್ಸ್ ಸಭೆ ನಡೆಸುವಂತೆ ತಾ.ಪಂ.ಕಾರ್ಯನಿರ್ವಹಣಾಽಕಾರಿ ರಾಜಣ್ಣ ತಿಳಿಸಿದರು. ಉಳಿ ಗ್ರಾ.ಪಂ.ಸದಸ್ಯ ವಸಂತ ಅವರು, ಕ್ವಾರಂಟೈನ್ ವ್ಯವಸ್ಥೆಯನ್ನು ಸಮರ್ಪಕಗೊಳಿಸಲು ಸಲಹೆ ನೀಡಿದರು.

ಸಭೆಯಲ್ಲಿ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು, ಬುಡಾ ಅಧ್ಯಕ್ಷ ದೇವದಾಸ್ ಶೆಟ್ಟಿ, ಫ್ಲೈಯಿಂಗ್ ಸ್ಕಾಡ್ ಅಧಿಕಾರಿ ಚೆನ್ನಕೇಶವಮೂರ್ತಿ, ಉಳಿ ಗ್ರಾ.ಪಂ.ಅಧ್ಯಕ್ಷ ಸುರೇಶ್ ಮೈರ, ಉಪಾಧ್ಯಕ್ಷ ಚಿದಾನಂದ ರೈ, ಅಭಿವೃದ್ಧಿ ಅಧಿಕಾರಿ ಶ್ರೀಧರ, ಗ್ರಾ.ಪಂ.ಸದಸ್ಯರು, ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.