ಸಂಕಷ್ಟಕ್ಕೊಳಗಾದವರಿಗೆ ಬಿ.ಸಿ.ರೋಡಿನಲ್ಲಿ ಯುವ ಕಾಂಗ್ರೆಸ್ ನಿಂದ ಊಟೋಪಚಾರ

ಬಂಟ್ವಾಳ: ಲಾಕ್ ಡೌನ್ ಸಂದರ್ಭ ಸಂಕಷ್ಟಕ್ಕೊಳಗಾದವರಿಗೆ ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಊಟೋಪಚಾರ ಆರನೇ ದಿನವಾದ ಭಾನುವಾರ ಬಿ.ಸಿ.ರೋಡಿನಲ್ಲಿ ನಡೆಯಿತು.

ಮಾಜಿ ಸಚಿವ ಬಿ.ರಮಾನಾಥ ರೈ ಅವರ ಉಪಸ್ಥಿತಿಯಲ್ಲಿ ಅವರ ಸೂಚನೆಯಂತೆ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್ ಮುಂದಾಳತ್ವದಲ್ಲಿ ಬ್ಲಾಕ್ ಎಲ್ಲಾ ಪದಾಧಿಕಾರಿಗಳ ಸಹಕಾರದೊಂದಿಗೆ ಸಂಕಷ್ಟಕ್ಕೊಳಗಾದವರಿಗೆ ಊಟ ವಿತರಿಸಲಾಯಿತು.

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್  ಸಮಿತಿ ಅಧ್ಯಕ್ಷ ರಾದ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾದ ಬೇಬಿ ಕುಂದರ್,  ಮಾಜಿ ಅಧ್ಯಕ್ಷ ಪ್ರಶಾಂತ್ ಕುಲಾಲ್ ನೆಟ್ಲ , ಸಾಮಾಜಿಕ ಜಾಲತಾಣ ಬಂಟ್ವಾಳ ವಿಧಾನಸಭಾ ಕ್ಷೇತ್ರ  ಸಂಚಾಲಕ ಉಮ್ಮರ್ ಕುಂಞಿ, ಪದಾಧಿಕಾರಿಗಳಾದ ವಿನಯ್ ಸಿಂಧ್ಯಾ, ಹಫೀಜ್ ಸಾಲೆತ್ತೂರು, ರಾಹುಲ್ ಬಿ, ಇಸ್ರಾರ್ ಗೂಡಿನಬಳಿ, ಸಂದೀಪ್ ಬೆಂಜನಪದವು , ಜೈಸನ್ ಕ್ರಾಸ್ತಾ, ಸಿರಾಜ್ ಮದಕ ಸಹಿತ ಹಲವರು ಭಾಗವಹಿಸಿದ್ದರು. ಲಾಕ್ ಡೌನ್ ಇರುವವರೆಗೆ ಈ ಕಾರ್ಯ ನಡೆಯಲಿದ್ದು, ಪಕ್ಷದ ಹಲವು ನಾಯಕರು , ಕೊಡುಗೈ ದಾನಿಗಳು, ಯುವ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಕೈ ಜೋಡಿಸಿದ್ದಾರೆ ಎಂದು ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾದ ಇಬ್ರಾಹಿಂ ನವಾಝ್ ತಿಳಿಸಿದ್ದಾರೆ..ಈ ಲಾಕ್ ಡೌನ್ ಸಂಕಷ್ಟ ಒಳಗಾಗಿರುವ ಜನರ ಸೇವೆ ಮಾಡಲು ಯುವ ಕಾಂಗ್ರೆಸ್ ಸಮಿತಿ ಪಾಣೆಮಂಗಳೂರು ಬ್ಲಾಕ್ ವತಿಯಿಂದ ಕೋವಿಡ್ ಹೆಲ್ಪ್ ಲೈನ್ ಆರಂಭಿಸಿದ್ದು ಅದರಲ್ಲಿ ಯುವ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳ ತಂಡವನ್ನು ಐದು ವಿಭಾಗಗಳಾಗಿ ವಿಂಗಡಿಸಿ ವಿವಿಧ ಜವಾಬ್ದಾರಿಗಳನ್ನು ಅವರಿಗೆ ನೀಡಲಾಗಿದೆ ಎಂದವರು ತಿಳಿಸಿದ್ದಾರೆ.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಂಕಷ್ಟಕ್ಕೊಳಗಾದವರಿಗೆ ಬಿ.ಸಿ.ರೋಡಿನಲ್ಲಿ ಯುವ ಕಾಂಗ್ರೆಸ್ ನಿಂದ ಊಟೋಪಚಾರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*