ಬಂಟ್ವಾಳ: ತಾಲೂಕಿನ ಕಾವಳಪಡೂರು ಗ್ರಾಮದ 34 ಮಂದಿಗೆ ಕೊರೊನಾ ಸೋಂಕು ಬಾಧಿಸಿರುವ ಹಿನ್ನೆಲೆಯಲ್ಲಿ ಸೂಕ್ತ ಕ್ರಮಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸೂಚಿಸಿದರು.
ಶಾಸಕರ ನೇತೃತ್ವದಲ್ಲಿ ಕಾವಳಪಡೂರು ಗ್ರಾ.ಪಂ.ನ ಸಭಾಂಗಣದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ನಡೆಯಿತು. ವಗ್ಗದಲ್ಲಿ ಕೋವಿಡ್ ಕೇರ್ ಸೆಂಟರ್ ನ ವ್ಯವಸ್ಥೆ ಮಾಡಲಾಗಿದ್ದು , ಅದರ ಉತ್ತಮ ನಿರ್ವಹಣೆ ಗೆ ಟಾಸ್ಕ್ ಫೋರ್ಸ್ ಕೆಲಸ ಮಾಡಲು ಸೂಚಿಸಿದರು. ಟಾಸ್ಕ್ ಫೋರ್ಸ್ ಸಭೆಯಲ್ಲಿ ಸರಿಯಾದ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.
ಈ ಸಂದರ್ಭದಲ್ಲಿ ಕಾವಳಪಡೂರು ಗ್ರಾ.ಪಂಚಾಯತ್ ಅಧ್ಯಕ್ಷೆ ರಜನಿ, ಉಪಾಧ್ಯಕ್ಷೆ ಲಕ್ಷ್ಮೀ, ತಾ.ಪಂ.ಇಒ.ರಾಜಣ್ಣ, ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್, ಪಿಡಿಒ ಶ್ರೀಧರ್, ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು , ವಿಎ ಆಶಾ ಮೆಹಂದಲೆ, ಟಾಸ್ಕ್ ಫೋರ್ಸ್ ಸಮಿತಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.