ಬಂಟ್ವಾಳ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ಹಾಗೂ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿ 275 ಸಂದಿಸುವ ಮಾಣಿ ಜಂಕ್ಷನ್ನಲ್ಲಿ ವಾಹನ ಸವಾರರ ಸುರಕ್ಷತೆಯ ಹಿತ ದೃಷ್ಟಿಯಿಂದ ವಿಟ್ಲ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ವಿನೋದ್ ರೆಡ್ಡಿಯವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ, ಊರ ನಾಗರಿಕರ ಸಂಪೂರ್ಣ ಸಹಕಾರದೊಂದಿಗೆ ರಸ್ತೆ ವಿಭಾಜಕಗಳನ್ನು ಅಳವಡಿಸಲಾಯಿತು.ಈ ಸಂದರ್ಭದಲ್ಲಿ ಸ್ತಳೀಯ ಸಾಮಾಜಿಕ ಕಾರ್ಯಕರ್ತರು ಉಪಸ್ಥಿತರಿದ್ದರು. ಎರಡು ಹೆದ್ದಾರಿ ಗಳು ಸಂದಿಸುವ ಜಾಗದಲ್ಲಿ ಈ ರಸ್ತೆ ವಿಭಾಜಕ ದ ನಿರ್ಮಾಣ ಮುಂದಿನ ದಿನಗಳಲ್ಲಿ ರಸ್ತೆ ಯಲ್ಲಿ ವಾಹನಗಳ ವ್ಯವಸ್ತಿತ ಓಡಾಟಕ್ಕೆ ಅನುವು ಮಾಡಿಕೊಡಲಿದೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…