ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೊರಡಿಸಿರುವ ಮುನ್ಸೂಚನೆಯಂತೆ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಕಾರಣದಿಂದಾಗಿ ಕರ್ನಾಟಕ ಕರಾವಳಿ ಭಾಗದಲ್ಲಿ ಮೇ 14 ರಿಂದ 17 ರವರೆಗೆ ಮೂರು ದಿನಗಳ ಅವಧಿಯಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುತ್ತದೆ.
ಜಿಲ್ಲಾ/ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತನ್ನು ನಿಭಾಯಿಸಲು ತಯಾರಿ ಮಾಡಿಕೊಳ್ಳುವುದು, ಸಾರ್ವಜನಿಕರು ಮತ್ತು ಮೀನುಗಾರರು ಸದಿ, ಸಮುದ್ರಕ್ಕೆ ಇಳಿಯದಂತೆ ಎಚ್ಚರದಿಂದ ಇರಲು ಹಾಗೂ ತಗ್ಗು ಪ್ರದೇಶಗಳಿಗೆ ಇಳಿಯದಂತೆ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಲಾಗಿದೆ. ಈ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಕೆಳಗೆ ನಿಲ್ಲದೆ ಸುರಕ್ಷಿತ ಸ್ಥಳಗಳನ್ನು ತಲುವುದು ಸೂಕ್ತವಾಗಿದೆ. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳ ತುರ್ತಸೇವೆಗೆ ಕಂಟ್ರೋಲ್ ರೂಂ ನಂಬರ್: 1077 ಹಾಗೂ 9483908000 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Be the first to comment on "ಮೇ 14ರಿಂದ 17 – ಅಧಿಕ ಮಳೆ ಮುನ್ಸೂಚನೆ, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ, ಜಾಗ್ರತೆ ಇರಲು ಸಾರ್ವಜನಿಕರಿಗೆ ಸೂಚನೆ"