ರಾಜ್ಯದ ಎಲ್ಲಾ ಬ್ಯಾಂಕ್‍ಗಳು ಹಾಗೂ ಇತರ ಹಣಕಾಸು ಸಂಸ್ಥೆಗಳು ಮತ್ತು ಸಾಲ ನೀಡಿದ ಎಲ್ಲಾ ಸಂಸ್ಥೆಗಳು ಸಾಲ ವಸೂಲಿ ಮಾಡಲು ಇನ್ನು 6 ತಿಂಗಳ ಅವಧಿ ಮುಂದೂಡಿ ಆದೇಶ ಹೊರಡಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದಾರೆ.
ರಾಜ್ಯದ ವಿವಿಧ ಮೂಲಗಳಿಂದ ಸಾಲ ಪಡೆದ ಬಡವರು, ರೈತರು, ಕೂಲಿಕಾರ್ಮಿಕರು ಸೇರಿದಂತೆ ಅನೇಕರು ಕೋವಿಡ್‍ನ ಸಂಕಷ್ಟ ಕಾಲದಲ್ಲಿ ಸಾಲ ಮರುಪಾವತಿಸಲಾಗದಷ್ಟು ಆರ್ಥಿಕವಾಗಿ ಕಂಗೆಟ್ಟಿದ್ದಾರೆ ಇಂತಹ ಸಂದಿಗ್ಧ ಸ್ಥಿತಿಯಲ್ಲಿ ವಿವಿಧ ಹಣಕಾಸು ಸಂಸ್ಥೆಗಳು ಹಾಗೂ ಖಾಸಗಿ ಲೇವಾದೇವಿ ದಾರರು ಸಾಲದ ಮರುಪಾವತಿಗೆ ಒತ್ತಾಯಿಸುತ್ತಿದ್ದು, ಬಡಜನರು ಸಾಲಮರುಪಾತಿಸಲು ಶಕ್ತರಿರುವುದಿಲ್ಲ. ಆದ್ದರಿಂದ ಮಾನ್ಯ ಮುಖ್ಯಮಂತ್ರಿಗಳು ಈ ಮನವಿಯನ್ನು ಪರಿಗಣಿಸಿ ರಾಜ್ಯದಎಲ್ಲಾ ಬ್ಯಾಂಕ್‍ಗಳು ಹಾಗೂ ಇತರ ಹಣಕಾಸು ಸಂಸ್ಥೆಗಳು ಮತ್ತು ಸಾಲ ನೀಡಿದ ಎಲ್ಲಾ ಸಂಸ್ಥೆಗಳು ಸಾಲ ವಸೂಲಿ ಮಾಡಲು ಇನ್ನು 6 ತಿಂಗಳ ಅವಧಿ ಮುಂದೂಡಿ ಆದೇಶ ಹೊರಡಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದಾರೆ.
Be the first to comment on "ಸಾಲ ವಸೂಲಿ: 6 ತಿಂಗಳು ಅವಧಿ ಮುಂದೂಡಲು ಸಚಿವ ಕೋಟ ಮನವಿ"