Uncategorized

ಕೋಳಿ ಅಂಕಕ್ಕೆ ದಾಳಿ: 11 ಮಂದಿ ವಶಕ್ಕೆ

ಬಂಟ್ವಾಳ: ನೈನಾಡಿನ ಗೇರು ಮರದ ಹಾಡಿಯಲ್ಲಿ ಕೋಳಿ ಅಂಕ ಆಡುತ್ತಿದ್ದ ಕುರಿತು ಖಚಿತ ಸುಳಿವಿನ ಮೇರೆಗೆ ಪುಂಜಾಲಕಟ್ಟೆ ಪೊಲೀಸರು ದಾಳಿ ನಡೆಸಿ 11 ಮಂದಿಯನ್ನು ವಶಕ್ಕೆ ಮಾಡಿದ್ದಾರೆ.

ಪುಂಜಾಲಕಟ್ಟೆ ಪೊಲೀಸ್‌ ಠಾಣಾ ಪಿಎಸ್‌ಐ ಸೌಮ್ಯ ಜೆ  ಸಿಬ್ಬಂದಿಗಳೊಂದಿಗೆ ಕೋವಿಡ್‌ -19 ರೋಗದ ಮುನ್ನೆಚ್ಚರಿಕಾ ಕ್ರಮವಾಗಿ ಠಾಣಾ ವ್ಯಾಪ್ತಿಯಲ್ಲಿ  ರೌಂಡ್ಸ್‌ ಕರ್ತವ್ಯದಲ್ಲಿರುವ ಸಮಯ ಬಂಟ್ವಾಳ ತಾಲ್ಲೂಕು ನೈನಾಡು  ಸ್ನೇಹಗಿರಿ ಎಂಬಲ್ಲಿರುವ ಸರಕಾರಿ ಗೇರು ಮರದ ಹಾಡಿಯಲ್ಲಿ ಆರೋಪಿಗಳು ಅಕ್ರಮವಾಗಿ  ಕೋಳಿ ಅಂಕವೆಂಬ ಜೂಜಾಟವಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ಸಿಬ್ಬಂದಿಗಳೊ೦ದಿಗೆ ಸ್ಥಳಕ್ಕೆ ದಾಳಿ ನಡೆಸಿದರು. ಈ ಸಂದರ್ಭ, 11 ಮಂದಿ ಆರೋಪಿಗಳನ್ನು ಮತ್ತು ಆಟಕ್ಕೆ ಉಪಯೋಗಿಸಿದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದು, ಉಳಿದ ಆರೋಪಿಗಳು ಓಡಿ ತಪ್ಪಿಸಿಕೊಂಡಿರುತ್ತಾರೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts